ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವೂದ್‌ ಸಹೋದರ ಇಕ್ಬಾಲ್‌ ಕಸ್ಕರ್ ಬಂಧಿಸಿದ ಜಾರಿ ನಿರ್ದೇಶನಾಲಯ

Last Updated 18 ಫೆಬ್ರುವರಿ 2022, 11:20 IST
ಅಕ್ಷರ ಗಾತ್ರ

ಮುಂಬೈ: 1993ರ ಮುಂಬೈ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ರೂವಾರಿ, ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸಹೋದರ, ಜೈಲಿನಲ್ಲಿರುವ ಇಕ್ಬಾಲ್‌ ಕಸ್ಕರ್‌ನನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಂಧಿಸಿದೆ.

ಹಲವು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಥಾಣೆ ಜೈಲಿನಲ್ಲಿರುವ ಕಸ್ಕರ್‌ನನ್ನು ಹಣ ಅಕ್ರಮ ವರ್ಗಾವಣೆ ಸಂಬಂಧ ಇತ್ತೀಚೆಗೆ ದಾಖಲಾದ ಹೊಸ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ)ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಭೂಗತ ಜಗತ್ತಿನೊಂದಿಗೆ ನಂಟು ಹೊಂದಿ, ಪರಾರಿಯಾಗಿರುವ ಪಾತಕಿ ದಾವೂದ್‌ ಇಬ್ರಾಹಿಂ ಮತ್ತು ಇತರರ ವಿರುದ್ಧ ಹೊಸದಾಗಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗಾಗಿ ಕಸ್ಕರ್‌ನನ್ನು ಇ.ಡಿ ತನ್ನ ಕಸ್ಟಡಿಗೆ ಪಡೆಯುವ ನಿರೀಕ್ಷೆಯಿದೆ.

ಮುಂಬೈ ಭೂಗತ ಲೋಕದ ನಂಟಿರುವ ಅಕ್ರಮ ಆಸ್ತಿ ವ್ಯವಹಾರಗಳು ಮತ್ತು ಹವಾಲಾ ವಹಿವಾಟುಗಳಿಗೆ ಸಂಬಂಧಿಸಿ ಫೆಬ್ರುವರಿ 15ರಂದು ನಡೆಸಿದ ದಾಳಿಗಳ ನಂತರ ಇ.ಡಿ ಈ ಕ್ರಮ ಕೈಗೊಂಡಿದೆ. ದಾವೂದ್‌ ಇಬ್ರಾಹಿಂ ಅವರ ಮೃತ ಸಹೋದರಿ ಹಸೀನಾ ಪಾರ್ಕರ್, ಕಸ್ಕರ್ ಮತ್ತು ಪಾತಕಿ ಛೋಟಾ ಶಕೀಲ್‌ನ ಸೋದರ ಮಾವ ಸಲೀಂ ಖುರೇಷಿ ಅಲಿಯಾಸ್ ಸಲೀಂ ಫ್ರೂಟ್‌ ಅವರಿಗೆ ಸೇರಿದ 10 ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯ ನಡೆಸಿತ್ತು. ದಾಳಿಯ ನಂತರ ಖುರೇಷಿ ಅವರನ್ನೂ ಇ.ಡಿ ವಿಚಾರಣೆಗೆ ಒಳಪಡಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ದಾವೂದ್‌ ಮತ್ತು ಇತರರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಆಧರಿಸಿ, ಇ.ಡಿ ಈ ಪ್ರಕರಣ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT