ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸಂಸದಕೆ.ಡಿ. ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಾಗಿ ಬುಧವಾರ ಅಧಿಕೃತ ಮೂಲಗಳು ತಿಳಿಸಿವೆ.

ಹಣಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಸಿಂಗ್ ಅವರನ್ನು ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ. ಬಂಧಿತ ಸಿಂಗ್ ಅವರು ಸ್ವಲ್ಪ ಸಮಯದಿಂದ ಟಿಎಂಸಿ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಹಣ ಅಕ್ರಮ ವರ್ಗಾವಣೆಯಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯವರು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸಿಂಗ್ ಮತ್ತು ಅವರೊಂದಿಗೆ ಸಂಪರ್ಕ ಹೊಂದಿದವರನ್ನು ವಿಚಾರಣೆಗೆ ಒಳಪಡಿಸಿದ್ದರು. ಇದೇ ಎರಡು ಪ್ರಕರಣಗಳ ಭಾಗವಾಗಿ ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.