ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿಯನ್ನು ಬಂಧಿಸಿದ ಇ.ಡಿ

Last Updated 15 ಫೆಬ್ರವರಿ 2023, 6:36 IST
ಅಕ್ಷರ ಗಾತ್ರ

ತಿರುವನಂತಪುರ: ಯುಎಇ ಮೂಲದ ಕಂಪನಿ ಪ್ರಾಯೋಜಿತ ವಸತಿ ಯೋಜನೆಯೊಂದರ ಅಕ್ರಮಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯದ(ಇ ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ಕಳೆದ ತಿಂಗಳು ಸೇವೆಯಿಂದ ನಿವೃತ್ತರಾಗಿರುವ ಶಿವಶಂಕರ್ ಅವರನ್ನು ಈ ಹಿಂದೆಯೂ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು. ಮೂರು ತಿಂಗಳಿಗೂ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರು.

ವಸತಿ ಯೋಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಶಂಕರ್ ಅವರನ್ನು ಕಳೆದ ಎರಡು ದಿನಗಳಿಂದ ಕೊಚ್ಚಿಯಲ್ಲಿ ಇಡಿ ವಿಚಾರಣೆ ನಡೆಸುತ್ತಿತ್ತು. ಮಂಗಳವಾರ ತಡರಾತ್ರಿ ಅವರನ್ನು ಬಂಧಿಸಲಾಗಿದೆ. ಇಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ ವಸತಿ ಯೋಜನೆಯನ್ನು ಖಾಸಗಿ ಸಂಸ್ಥೆ ಯುನಿಟಾಕ್‌ಗೆ ನೀಡಲು ಶಿವಶಂಕರ್ ಲಂಚ ಪಡೆದಿದ್ದಾರೆ ಎಂಬ ಆರೋಪವಿದೆ.

₹4 ಕೋಟಿಗೂ ಅಧಿಕ ಹಣವನ್ನು ವಿವಿಧ ವ್ಯಕ್ತಿಗಳಿಗೆ ಕಮಿಷನ್ ನೀಡಿರುವುದಾಗಿ ಕಂಪನಿ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದರು. ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರ ಬ್ಯಾಂಕ್ ಲಾಕರ್‌ನಿಂದ ವಶಪಡಿಸಿಕೊಂಡ ಸುಮಾರು ₹1 ಕೋಟಿ ಹಣ ಶಿವಶಂಕರ್ ಕಮಿಷನ್ ಪಡೆದಿರುವ ಹಣವಿರಬಹುದು ಎಂದು ಶಂಕಿಸಲಾಗಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರ ಅಕ್ಟೋಬರ್‌ನಲ್ಲಿ ಶಿವಶಂಕರ್ ಅವರನ್ನು ಇ.ಡಿ ಬಂಧಿಸಿತ್ತು. ಆರೋಪ ಬಂದಾಗ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಜಾಮೀನು ಪಡೆದ ನಂತರ ಮತ್ತ ಸೇವೆಗೆ ಮರುಸೇರ್ಪಡೆ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT