ಗುರುವಾರ , ಮಾರ್ಚ್ 30, 2023
24 °C

ಎನ್‌ಸಿಪಿ ನಾಯಕ ಏಕನಾಥ ಖಡ್ಸೆ ಅಳಿಯನ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣ ಸಂಬಂಧ ಎನ್‌ಸಿಪಿ ನಾಯಕ ಏಕನಾಥ ಖಡ್ಸೆ ಅವರ ಅಳಿಯ ಗಿರೀಶ್‌ ಚೌಧರಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.

2016ರಲ್ಲಿ ಪುಣೆಯಲ್ಲಿ ಫ್ಲ್ಯಾಟ್‌ ಖರೀದಿಸಿದ್ದು, ಇದರಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೌಧರಿ ಅವರ ವಿಚಾರಣೆ ನಡೆಸಿದರು. ಬಳಿಕ ಅವರನ್ನು ಬಂಧಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ವಿಚಾರಣೆ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗಳಿಗೆ ಚೌಧರಿ ಸರಿಯಾಗಿ ಉತ್ತರಿಸಲಿಲ್ಲ ಎಂದು ಇ.ಡಿ ಅಧಿಕಾರಿಗಳು ಆರೋಪಿಸಿದ್ದಾರೆ. ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಈ ಮುಂಚೆ ಬಿಜೆಪಿಯಲ್ಲಿ ಖಡ್ಸೆ ಅವರು ಕಳೆದ ವರ್ಷ ಆ ಪಕ್ಷವನ್ನು ತೊರೆದು, ಎನ್‌ಸಿಪಿ ಸೇರಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು