ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಹಣ ವ್ಯವಹಾರ: ಚೆನ್ನೈ ಕಂಪನಿಯ ಪ್ರವರ್ತಕ ಇ.ಡಿ ಬಲೆಗೆ

Last Updated 5 ಮಾರ್ಚ್ 2022, 11:20 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ ಕಲ್ಲಿದ್ದಲನ್ನು ಹೆಚ್ಚು ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಚೆನ್ನೈ ಮೂಲದ ಕೋಸ್ಟಲ್ ಎನರ್ಜಿ ಪ್ರೈ.ಲಿ. ಕಂಪನಿಯ ಪ್ರವರ್ತಕ ಎ.ಆರ್. ಬುಹಾರಿ ಅವರನ್ನುಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.

ಈ ಕಂಪನಿಯು ದುಬೈನ ಕೋಲ್ ಅಂಡ್ ಆಯಿಲ್ ಗ್ರೂಪ್ ಹಾಗೂ ಮಾರಿಷಸ್ ಮತ್ತು ಬ್ರಿಟಿಷ್ ವರ್ಜಿನ್ ಐಲೆಂಡ್ ನಲ್ಲಿರುವ ಕಂಪನಿಗಳನ್ನು ನಿರ್ವಹಿಸುತ್ತಿದ್ದು, ಬುಹಾರಿ ಅವರು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿದ್ದರು ಎಂದು ಇ.ಡಿ ಆರೋಪಿಸಿದೆ.

ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಕಳಪೆ ಗುಣಮಟ್ಟದ ಕಲ್ಲಿದ್ದಲನ್ನು ಮಾರಾಟ ಮಾಡಿದ್ದಾರೆ. ಇದರಿಂದ ₹ 564.48 ಕೋಟಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT