ನವದೆಹಲಿ: ರಸಗೊಬ್ಬರ ಹಗರಣವೊಂದಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ಲೇವಾದೇವಿ ಕೃತ್ಯದಲ್ಲಿ ಶಾಮೀಲಾದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯವು (ಇ.ಡಿ) ಆರ್‌ಜೆಡಿ ರಾಜ್ಯಸಭಾ ಸದಸ್ಯ ಅಮರೇಂದ್ರ ಧರಿ ಸಿಂಗ್ ಅವರನ್ನು ಬಂಧಿಸಿದೆ.

ಹಣ ಲೇವಾದೇವಿ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಸಂಸದ ಸಿಂಗ್ ಮತ್ತು ಉದ್ಯಮಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಇಫ್ಕೊ ಮತ್ತು ಇಂಡಿಯಾ ಪೊಟ್ಯಾಷ್ ಲಿಮಿಟೆಡ್ ಕಂಪನಿಗಳಿಗೆ ಸಂಬಂಧಿಸಿದ ಹಗರಣ ಇದಾಗಿದ್ದು, ಸಿಬಿಐ ಕಳೆದ ತಿಂಗಳು ಭ್ರಷ್ಟಾಚಾರ ಪ್ರಕರಣ ದಾಖಲಿಸಿತ್ತು. ಸಂಸದ ಸಿಂಗ್ ಅವರು ಈ ಪ್ರಕರಣದಲ್ಲಿ ಶಾಮೀಲಾಗಿರುವ ಜ್ಯೋತಿ ಟ್ರೇಡಿಂಗ್ ಕಾರ್ಪೊರೇಷನ್ ಎಂಬ ಕಂಪನಿಯ ಹಿರಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.