ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿಯಿಂದ ಐಎಎಸ್ ಅಧಿಕಾರಿಗೆ ಸೇರಿದ ₹ 27 ಕೋಟಿ ಮೌಲ್ಯದ ಆಸ್ತಿ ಜಪ್ತಿ

Last Updated 28 ನವೆಂಬರ್ 2020, 10:45 IST
ಅಕ್ಷರ ಗಾತ್ರ

ನವದೆಹಲಿ: ಛತ್ತೀಸ್‌ಗಡ ಮೂಲದ ಐಎಎಸ್‌ ಅಧಿಕಾರಿ ಬಾಬುಲಾಲ್ ಅಗರವಾಲ್‌ ಅವರಿಗೆ ಸೇರಿದ ₹ 27 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ, ಆದಾಯ ಮೀರಿದ ಆಸ್ತಿ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿ ಅಗರವಾಲ್‌ ಮತ್ತು ಕುಟುಂಬದ ಸದಸ್ಯರ ವಿರುದ್ಧ ಇ.ಡಿ ತನಿಖೆ ನಡೆಸುತ್ತಿದೆ.

ಜಪ್ತಿ ಮಾಡಿದ ಆಸ್ತಿಯಲ್ಲಿ, ಬ್ಯಾಂಕ್‌ನ ಅವರ ಖಾತೆಯಲ್ಲಿದ್ದ ನಗದು ಸೇರಿದಂತೆ ಸ್ಥಿರಾಸ್ತಿ, ಚರಾಸ್ತಿ ಒಳಗೊಂಡಿದೆ. ಇವುಗಳ ಒಟ್ಟು ಮೌಲ್ಯದ ₹ 27.86 ಕೋಟಿ ಎಂದು ಇ.ಡಿ ಹೇಳಿಕೆ ತಿಳಿಸಿದೆ.

1988ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅಗರವಾಲ್‌ ಅವರನ್ನು ನವೆಂಬರ್ 9ರಂದು ರಾಯಪುರದ ಅವರ ನಿವಾಸದಲ್ಲಿ ಬಂಧಿಸಲಾಗಿತ್ತು. ಡಿ. 5ರವರೆಗೂ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಬಂಧನಕ್ಕೆ ಒಳಗಾದ ಸಂದರ್ಭದಲ್ಲಿ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬಂಧನದ ನಂತರ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT