ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಶ್‌ ಜೈನ್‌ಗೆ ಸೇರಿದ ₹21.31 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Last Updated 19 ಏಪ್ರಿಲ್ 2023, 16:40 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿ ಹವಾಲಾ ದಂದೆಕೋರ ನರೇಶ್‌ ಜೈನ್‌ಗೆ ಸೇರಿದ ₹21.31 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಮಾಹಿತಿ ನೀಡಿದೆ.

ಮಧ್ಯಪ್ರದೇಶದ ಇಂದೋರ್‌, ಉತ್ತರಪ್ರದೇಶದ ನೋಯ್ಡಾ, ಹಿಮಾಚಲ ಪ್ರದೇಶದ ಸೋಲನ್‌ ಮತ್ತು ಗುಜರಾತ್‌ನ ಗಾಂಧೀನಗರಗಳಲ್ಲಿಯ ಐದು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅವುಗಳಲ್ಲಿ ಫ್ಲಾಟ್‌ಗಳು ಮತ್ತು ಜಮೀನು ಸೇರಿವೆ. ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ಆದೇಶದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇ.ಡಿ. ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT