ಮಂಗಳವಾರ, ಜನವರಿ 26, 2021
20 °C

ಹಣಕಾಸು ಅವ್ಯವಹಾರ: ಫಾರೂಕ್‌ ಮತ್ತಿತರರ ₹12 ಕೋಟಿ ಮೌಲ್ಯದ ಆಸ್ತಿ ವಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೇಶನ್‌ನಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು–ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಹಾಗೂ ಇತರ ಆರೋಪಿಗಳಿಗೆ ಸೇರಿದ ₹11.86 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯವು(ಇ.ಡಿ) ವಶಕ್ಕೆ ಪಡೆದಿದೆ.

’ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದೆ. ಎರಡು ಸ್ಥಿರ ಆಸ್ತಿ, ಒಂದು ವಾಣಿಜ್ಯ ಕಟ್ಟಡ ಮತ್ತು ಇತರ ಮೂರು ಕಡೆಗಳಲ್ಲಿ ಖಾಲಿ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಇವೆಲ್ಲವೂ ಜಮ್ಮು–ಕಾಶ್ಮೀರದಲ್ಲಿವೆ‘ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಶಪಡಿಸಿಕೊಂಡ ಆಸ್ತಿಗಳ ಮಾರುಕಟ್ಟೆ ದರ ₹60–70 ಕೋಟಿ ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫಾರೂಕ್‌ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ಬಾರಿ ವಿಚಾರಣೆ ನಡೆಸಿದ್ದಾರೆ. ಅಕ್ಟೋಬರ್‌ನಲ್ಲಿ ಅವರು ಶ್ರೀನಗರದಲ್ಲಿ ವಿಚಾರಣೆಗೆ ಹಾಜರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು