ಹವಾಲ ವಹಿವಾಟು: ದೆಹಲಿ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಇ.ಡಿ. ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಜೈನ್ ನಿವಾಸಕ್ಕೆ ತೆರಳಿರುವ ಅಧಿಕಾರಿಗಳು, ಕೋಲ್ಕತ್ತ ಮೂಲದ ಕಂಪನಿಯೊಂದರ ಹವಾಲ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿ ಶೋಧ ನಡೆಸಿದ್ದಾರೆ ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಸಚಿವ ಜೈನ್ ಜೂನ್ 9ರವರೆಗೆ ಇ.ಡಿ. ವಶಕ್ಕೆ
ED raids Delhi Health Minister Satyendra Jain's residence
Read @ANI Story | https://t.co/jCoHvoVdhS#SatyendarJain #enforcementdirectorate #RAID pic.twitter.com/RVsAXgj5yg
— ANI Digital (@ani_digital) June 6, 2022
ಜೈನ್ ಅವರನ್ನು ಕಳೆದ ವಾರ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಬಳಿಕ ದೆಹಲಿ ನ್ಯಾಯಾಲಯ ಅವರನ್ನು ಜೂನ್ 9ರ ವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು.
ಜೈನ್ ಬಂಧನ ರಾಜಕೀಯ ಆಯಾಮ ಪಡೆದುಕೊಂಡಿತ್ತು.
ಹವಾಲಾ ಎಂದರೆ ಏನು? ಹೇಗೆ ನಡೆಯುತ್ತೆ ವ್ಯವಹಾರ?
‘ಎಂಟು ವರ್ಷ ಹಳೆಯ ‘ಹುಸಿ’ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿದೆ. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಎಎಪಿ ಉಸ್ತುವಾರಿಯಾಗಿ ಸತ್ಯೇಂದ್ರ ಅವರು ಇದ್ದಾರೆ. ಅಲ್ಲಿ ಚುನಾವಣೆ ಸೋಲುವ ಭೀತಿಯಲ್ಲಿರುವ ಬಿಜೆಪಿ, ಹೀಗೆ ಮಾಡಿದೆ’ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟೀಕಿಸಿದ್ದರು.
ಜೈನ್ ಮತ್ತು ಅವರ ಕುಟುಂಬದ ಒಡೆತನದ ಕಂಪನಿಗಳಿಗೆ ಸೇರಿದ ₹4.81 ಕೋಟಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ. ಇತ್ತೀಚೆಗೆ ಹೇಳಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.