ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಕೇಸ್: ಡಿಕೆಶಿ ವಿರುದ್ಧದ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

Last Updated 1 ಜುಲೈ 2022, 6:12 IST
ಅಕ್ಷರ ಗಾತ್ರ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಇತರೆ ನಾಲ್ವರು ಆರೋಪಿಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಇ.ಡಿ ವಿಶೇಷ ನ್ಯಾಯಾಲಯವುಜುಲೈ 30ಕ್ಕೆ ಮುಂದೂಡಿದೆ.

ಡಿಕೆಶಿಗೆ ನೀಡಿರುವ ಜಾಮೀನು ನವೀಕರಿಸಲು ವಕೀಲರು ಮನವಿ ಸಲ್ಲಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಡಿಕೆಶಿ ಅವರಿಗೆ ಜಾಮೀನು ನೀಡಿರುವುದು ದೆಹಲಿ ಹೈಕೋರ್ಟ್, ಇಡಿ ವಿಶೇಷ ನ್ಯಾಯಾಲಯದಲ್ಲಿ ಅಲ್ಲ ಎಂದು ವಾದಿಸಿದರು. ಅಲ್ಲದೆ, ಈ ನ್ಯಾಯಾಲಯ ಜಾಮೀನನ್ನು ನಿರಾಕರಿಸಬೇಕು ಎಂದರು.

ಇಡಿ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆಶಿ ಪರ ವಕೀಲರು, ಇದೇ ಕೋರ್ಟ್ ಕಾರ್ತಿ ಚಿದಂಬರಂಗೆ ಜಾಮೀನು ನೀಡಿದೆ. ಡಿಕೆಶಿಗೂ ಜಾಮೀನು ನೀಡಬಹುದು ಎಂದು ವಾದಿಸಿದರ.

ವಾದ–ಪ್ರತಿವಾದ ಆಲಿಸಿದ ಇ.ಡಿ ನ್ಯಾಯಾಲಯವು ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT