ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 26ರಂದು ವಿಚಾರಣೆಗೆ ಹಾಜರಾಗಲು ಸೋನಿಯಾ ಗಾಂಧಿಗೆ ಇ.ಡಿ ಸಮನ್ಸ್

Last Updated 22 ಜುಲೈ 2022, 16:14 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ನೀಡಿದ್ದ ದಿನಾಂಕವನ್ನು ಜಾರಿ ನಿರ್ದೇಶನಾಲಯವು ಬದಲಿಸಿದೆ.

ಜುಲೈ 25ರ ಬದಲು 26 ರಂದು ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್ ನೀಡಲಾಗಿದೆ.

ಬದಲಾವಣೆಗೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ.

ಗುರುವಾರ ನಡೆದ ಮೊದಲ ದಿನದ ವಿಚಾರಣೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸೋನಿಯಾ, ಇ.ಡಿ ಅಧಿಕಾರಿಗಳ ಪ್ರಶ್ನೆ ಎದುರಿಸಿದ್ದರು.

ಸೋನಿಯಾ ಗಾಂಧಿ ವಿಚಾರಣೆ ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT