ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ.ಡಿ: ಮುಖ್ಯಸ್ಥರ ಅಧಿಕಾರ ಅವಧಿ ಮತ್ತೆ ವಿಸ್ತರಣೆ

Last Updated 17 ನವೆಂಬರ್ 2022, 20:06 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ಮುಖ್ಯಸ್ಥ ಸಂಜಯ್‌ ಕುಮಾರ್ ಮಿಶ್ರಾ ಅವರ ಅಧಿಕಾರ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಿ ಕೇಂದ್ರ ಸರ್ಕಾರ ಗುರುವಾರ ಆದೇಶಿಸಿದೆ. ಈ ಮೂಲಕ ಅವರ ಅಧಿಕಾರ ಅವಧಿಯು 2023ರ ನವೆಂಬರ್‌ 18ರವರೆಗೆ ವಿಸ್ತರಿಸಿದಂತಾಗಿದೆ.

ಮಿಶ್ರಾ ಅವರು 2018ರ ನವೆಂಬರ್‌ 19ರಂದು ಎರಡು ವರ್ಷಗಳ ಅವಧಿಗೆ ಇ.ಡಿ ನಿರ್ದೇಶಕರಾಗಿ ನೇಮಕವಾಗಿದ್ದರು. ಕೇಂದ್ರ ಸರ್ಕಾರ 2020ರ ನವೆಂಬರ್‌ 13ರಂದು ಅವರ ನೇಮಕಾತಿ ಆದೇಶವನ್ನು ಮಾರ್ಪಡಿಸಿ, ಎರಡು ವರ್ಷಗಳ ಅಧಿಕಾರಾವಧಿಯನ್ನು ಮೂರು ವರ್ಷಕ್ಕೆ ವಿಸ್ತರಿಸಿತ್ತು.

ಇ.ಡಿ ಮತ್ತು ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಎರಡು ವರ್ಷಗಳ ಕಡ್ಡಾಯ ಅವಧಿಯ ಬಳಿಕ ಮೂರು ವರ್ಷಗಳವರೆಗೆ ವಿಸ್ತರಿಸಬಹುದು ಎಂದು ಸರ್ಕಾರ ಕಳೆದ ವರ್ಷ ಸುಗ್ರೀವಾಜ್ಞೆ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT