ಗುರುವಾರ , ಜೂನ್ 24, 2021
25 °C

ಮಹಾರಾಷ್ಟ್ರ: ಅನಿಲ್‌ ದೇಶಮುಖ್‌ ವಿರುದ್ಧ ಇ.ಡಿ ಪ್ರಕರಣ ದಾಖಲು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ ಎಂದು ಮಂಗಳವಾರ ಅಧಿಕೃತ ಮೂಲಗಳು ತಿಳಿಸಿವೆ.

ಅನಿಲ್ ದೇಶಮುಖ್ ವಿರುದ್ಧ ಇತ್ತೀಚೆಗೆ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿದ ಎಫ್‌ಐಆರ್ ಅಧ್ಯಯನದ ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗ ಪ್ರಕರಣದ ಇತರೆ ಆರೋಪಿಗಳನ್ನು ಹೊರತುಪಡಿಸಿ ಅನಿಲ್‌ ದೇಶಮುಖ್‌ ಅವರಿಗೆ ಸಮನ್ಸ್‌ ನೀಡುವ ಸಾಧ್ಯತೆ ಇದೆ. 

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ವೀರ್‌ ಸಿಂಗ್ ಅವರು ಅನಿಲ್‌ ದೇಶಮುಖ್‌ ವಿರುದ್ಧ ಲಂಚದ ಆರೋಪ ಹೊರಿಸಿದ್ದರು. ಇದನ್ನು ಪರಿಶೀಲಿಸುವಂತೆ ಬಾಂಬೆ ಹೈಕೋರ್ಟ್‌ ಆದೇಶ ನೀಡಿತ್ತು. ಈ ಆದೇಶದ ಅನ್ವಯ ಸಿಬಿಐ ಪ್ರಾಥಮಿಕ ವಿಚಾರಣೆ ನಡೆಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು