ಮಹಾರಾಷ್ಟ್ರ: ಜು. 5ರಂದು ವಿಚಾರಣೆಗೆ ಹಾಜರಾಗಲು ದೇಶಮುಖ್‌ಗೆ ಇ.ಡಿ ಸಮನ್ಸ್

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 5ರಂದು ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
‘ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ದೇಶಮುಖ್ ಅವರಿಗೆ ನೀಡಿರುವ ಮೂರನೇ ಸಮನ್ಸ್ ಇದಾಗಿದೆ. ದಕ್ಷಿಣ ಮುಂಬೈನಲ್ಲಿರುವ ಇ.ಡಿ ಕಚೇರಿಯಲ್ಲಿ ಸೋಮವಾರ ಹೇಳಿಕೆ ದಾಖಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಎರಡು ಬಾರಿ ದೇಶ್‌ಮುಖ್ ಅವರು ಕೋವಿಡ್ ಬಗ್ಗೆ ಆತಂಕ ವ್ಯಕ್ತಪಡಿಸಿ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಇದರ ಬದಲಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲು ಅನುಮತಿ ನೀಡುವಂತೆ ಕೋರಿದ್ದರು.
ಬಹುಕೋಟಿ ಲಂಚ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ... ಉತ್ತರಾಖಂಡ್: 9 ಜನ ಸಿಎಂ, 5 ವರ್ಷ ಅವಧಿ ಪೂರೈಸಿದ್ದು ಒಬ್ಬರೇ!
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.