ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ: ಸಂಜಯ್ ರಾವುತ್‌ಗೆ ಮತ್ತೆ ಇ.ಡಿ ಸಮನ್ಸ್

Last Updated 20 ಜುಲೈ 2022, 16:02 IST
ಅಕ್ಷರ ಗಾತ್ರ

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 27ರಂದು ಮುಂಬೈಯಲ್ಲಿ ಮತ್ತೆ ವಿಚಾರಣೆಗೆ ಹಾಜರಾಗಲು ಶಿವಸೇನಾ ಸಂಸದ ಸಂಜಯ್ ರಾವುತ್‌ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸ ಸಮನ್ಸ್ ಜಾರಿಗೊಳಿಸಿದೆ.

ಆದರೆ ಇ.ಡಿ ಸೂಚಿಸಿದ ದಿನಾಂಕದಂದು ರಾಜ್ಯಸಭಾ ಸಂಸದರಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ರಾವುತ್ ಪರವಾಗಿ ವಕೀಲರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಇ.ಡಿ ಅಧಿಕಾರಿಗಳನ್ನು ಭೇಟಿಯಾದ ವಕೀಲರು ಈ ವಿಷಯ ತಿಳಿಸಿದ್ದು, ಆಗಸ್ಟ್ ಮೊದಲ ವಾರದ ಬಳಿಕ ಸಮಯ ನೀಡುವಂತೆ ವಿನಂತಿಸಿದ್ದಾರೆ.

ಈ ಮೊದಲು ಬುಧವಾರದಂದು ಹಾಜರಾಗುವಂತೆ ಇ.ಡಿ ಸೂಚಿಸಿತ್ತು ಎನ್ನಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ 60 ವರ್ಷದ ರಾವುತ್, ಮುಂಬೈಯ ಇ.ಡಿ ವಲಯದ ಕಚೇರಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿರುವುದಾಗಿ ಮೂಲಗಳು ಹೇಳಿವೆ.

ಈಗ ರಾವುತ್ ಅವರಿಗೆ ಒಂದು ವಾರದ ವಿನಾಯಿತಿ ನೀಡಿರುವ ಇ.ಡಿ, ಜುಲೈ 27ರಂದು ಹಾಜರಾಗುವಂತೆ ಸಮನ್ಸ್ ನೀಡಿದೆ.

ಆದರೆ ತಾವು ಯಾವುದೇ ತಪ್ಪು ಮಾಡಿಲ್ಲ. ತಮ್ಮ ವಿರುದ್ಧ ರಾಜಕೀಯ ಹಗೆತನ ಸಾಧಿಸಲಾಗುತ್ತಿದೆ ಎಂದು ರಾವುತ್ ಆರೋಪಿಸಿದ್ದಾರೆ.

ಜುಲೈ 1ರಂದು ರಾವುತ್ ಅವರನ್ನು ತನಿಖೆಗೊಳಪಡಿಸಲಾಗಿತ್ತು. ಅಲ್ಲದೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್ ಅಡಿಯಲ್ಲಿ ಅವರ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

ಅಂದು ಪ್ರತಿಕ್ರಿಯಿಸಿದ್ದ ರಾವುತ್, ನಾನು ಸಂಪೂರ್ಣ ಸಹಕಾರ ನೀಡಿದ್ದೇನೆ. ಅಲ್ಲದೆ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮತ್ತೆ ಕರೆ ಮಾಡಿದರೆ ಹಾಜರಾಗುತ್ತೇನೆ. ಯಾವುದೇ ಭಯ ನನಗಿಲ್ಲ. ಜೀವನದಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT