ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗೈರು ಹಾಜರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ನ್ಯಾಯಾಲಯದ ಮೊರೆ ಹೋಗಿದೆ.
ಅನಿಲ್ ದೇಶಮುಖ್ ಅವರಿಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಲಾಗಿದೆ. ಆದರೂ, ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಹಾಗಾಗಿ ಅವರ ವಿರುದ್ಧ ಐಪಿಸಿ ಕಲಂ 174ರ ಪ್ರಕಾರ ಕ್ರಮಕೈಗೊಳ್ಳಬೇಕೆಂದು ವಿಶೇಷ ನ್ಯಾಯಾಲಯದಲ್ಲಿ ಇ.ಡಿ ಶುಕ್ರವಾರ ಅರ್ಜಿ ಸಲ್ಲಿಸಿದೆ.
ಈ ಕಲಂನಡಿ ಒಂದು ತಿಂಗಳ ಸರಳ ಜೈಲು ಶಿಕ್ಷೆ ಅಥವಾ ₹500 ದಂಡ, ಇಲ್ಲವೇ ಎರಡನ್ನೂ ವಿಧಿಸಲು ಅವಕಾಶವಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.