ನವದೆಹಲಿ: ವಂಚನೆ ಆರೋಪಗಳ ಕಾರಣಕ್ಕೆ ಜೈಲಿನಲ್ಲಿರಿಸಲಾಗಿರುವ ಸುಕೇಶ್ ಚಂದ್ರಶೇಖರ್ ಹಾಗೂ ನಟಿ ಲೀನಾ ಮಾರಿಯಾ ಪಾಲ್ ದಂಪತಿಯನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ದಂಪತಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಇ.ಡಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯವನ್ನು ಕೋರುವ ನಿರೀಕ್ಷೆ ಇದೆ ಎಂದು ಇವೇ ಮೂಲಗಳು ಹೇಳಿವೆ.

ಗಣ್ಯವ್ಯಕ್ತಿಗಳು ಸೇರಿದಂತೆ ಹಲವರಿಗೆ ವಂಚನೆ ಮಾಡಿದ ಆರೋಪದ ಮೇಲೆ ದೆಹಲಿ ಪೊಲೀಸರು ಚಂದ್ರಶೇಖರ್ ದಂಪತಿಯನ್ನು ಬಂಧಿಸಿ, ರೋಹಿಣಿ ಜೈಲಿನಲ್ಲಿರಿಸಿದ್ದಾರೆ ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಚಂದ್ರಶೇಖರ್ ಸಹಚರರು ಎನ್ನಲಾದ ಇಬ್ಬರನ್ನು ಇ.ಡಿ ಇತ್ತೀಚೆಗೆ ಬಂಧಿಸಿದೆ.

ಕಳೆದ ಆಗಸ್ಟ್‌ನಲ್ಲಿ ಚೆನ್ನೈನಲ್ಲಿರುವ ಚಂದ್ರಶೇಖರ್‌ಗೆ ಸೇರಿದ ಮನೆ, ಕಚೇರಿಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ಸಮುದ್ರ ತೀರ ಸಮೀಪದ ಬಂಗ್ಲೆ ಮೇಲೆ ನಡೆಸಿದ ದಾಳಿ ಸಂದರ್ಭದಲ್ಲಿ ₹ 82.5 ಲಕ್ಷ ನಗದು ಹಾಗೂ 12ಕ್ಕೂ ಅಧಿಕ ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಲಾಗಿತ್ತು.

ಚಂದ್ರಶೇಖರ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿ ಇ.ಡಿ ಅಧಿಕಾರಿಗಳು ಈಗಾಗಲೇ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.