ಜಾರಿ ನಿರ್ದೇಶನಾಲಯದಿಂದ ಎನ್ಸಿಪಿ ನಾಯಕ ನವಾಬ್ ಮಲಿಕ್ ವಿಚಾರಣೆ

ಮುಂಬೈ: ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್ಸಿಪಿಯ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯವು ವಿಚಾರಣೆ ನಡೆಸುತ್ತಿದೆ.
ಆದರೆ, ಈ ಬಗ್ಗೆ ಇ.ಡಿ ಅಥವಾ ಎನ್ಸಿಪಿಯಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ. ನವಾಬ್ ಮಲಿಕ್ ಜಾರಿ ನಿರ್ದೇಶನಾಲಯದ ಕಚೇರಿಗೆ ತಲುಪಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
ಬಿಜೆಪಿಯು ತನ್ನನ್ನು ವಿರೋಧಿಸುವ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖಂಡ ನವಾಬ್ ಮಲಿಕ್ ಆರೋಪಿಸಿದ್ದಾರೆ.
ವರದಿಗಳ ಪ್ರಕಾರ, ಮಲಿಕ್ ಅವರನ್ನು ಬೆಳಿಗ್ಗೆ ಇಡಿ ಕಚೇರಿಗೆ ಕರೆದೊಯ್ಯಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.