ನ್ಯಾಷನಲ್ ಹೆರಾಲ್ಡ್ ಪ್ರಕರಣ: ಐದನೇ ಬಾರಿ ಇ.ಡಿ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.
ಇದರೊಂದಿಗೆ, ಐದನೇ ಬಾರಿ ರಾಹುಲ್ ಅವರು ವಿಚಾರಣೆಗೆ ಹಾಜರಾದಂತಾಗಿದೆ.
ಜೂನ್ 13ರಂದು ಮೊದಲ ಬಾರಿ ರಾಹುಲ್ ವಿಚಾರಣೆಗೆ ಹಾಜರಾಗಿದ್ದರು. ಒಟ್ಟು 40 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.
ಆಸ್ಪತ್ರೆಯಿಂದ ಸೋನಿಯಾ ಮನೆಗೆ: 23ಕ್ಕೆ ಹಾಜರಾಗಲು ಇ.ಡಿ ನೋಟಿಸ್
ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.
ಈ ಮಧ್ಯೆ, ಕೋವಿಡೋತ್ತರ ಆರೋಗ್ಯ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಸಂಜೆ ದೆಹಲಿಯ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ. ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಓದಿ...
ಪಾಕ್: ಹೆರಿಗೆ ವೇಳೆ ಶಿಶು ತಲೆ ಕತ್ತರಿಸಿ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ!
ಐದು ಅಡಿ ಉದ್ದದ ಕೊಳಕ ಮಂಡಲವನ್ನು ನುಂಗಿದ ದೈತ್ಯ ನಾಗರ ಹಾವು: ವಿಡಿಯೊ ವೈರಲ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.