ಬುಧವಾರ, ಜೂನ್ 16, 2021
21 °C

ದೆಹಲಿ: ಉದ್ಯಮಿ ನವನೀತ್ ಕಾಲ್ರಾಗೆ ಸೇರಿದ ಸ್ಥಳಗಳಲ್ಲಿ ಇಡಿ ಶೋಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನವನೀತ್ ಕಾಲ್ರಾ ಮತ್ತು ಅವರ ಸಹಚರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ.) ಶುಕ್ರವಾರ ಶೋಧ ನಡೆಸಿದೆ.

‘ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ದೆಹಲಿಯ ಹಲವೆಡೆ ಇಡಿಯು ಶೋಧ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ದಾಳಿಯನ್ನು ನಡೆಸಲಾಗಿದೆ’ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೇ 5ರಂದು ದೆಹಲಿ ಪೊಲೀಸರು ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಪ್ರಕರಣದಡಿ ಕಾಲ್ರಾ ವಿರುದ್ಧ ‍ಎಫ್‌ಐಆರ್‌ ದಾಖಲಿಸಿದ್ದರು. ಅಲ್ಲದೆ ಕಾಲ್ರಾಗೆ ಸಂಬಂಧಿಸಿದ ರೆಸ್ಟೊರೆಂಟ್‌ ಮತ್ತು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ 500 ಕ್ಕೂ ಹೆಚ್ಚು ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪವು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇಡಿಯು ಪಿಎಂಎಲ್‌ಎ ಕಾಯ್ದೆಯಡಿ ಕಾಲ್ರಾ ಮತ್ತು ಇತರರ ವಿರುದ್ಧ ದೂರ ದಾಖಲಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು