ಗುರುವಾರ , ಫೆಬ್ರವರಿ 25, 2021
20 °C

ಉತ್ತರ ಪ್ರದೇಶ: ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮನೆಯಲ್ಲಿ ಇ.ಡಿ ಶೋಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರ ಮನೆ ಮತ್ತು ಅವರಿಗೆ ಸಂಬಂಧಪಟ್ಟ ಇತರೆ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಇ.ಡಿಯು ಲಖನೌ, ಕಾನ್ಪುರ ಮತ್ತು ಅಮೇಥಿಯ ಹಲವು ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಕಾನ್ಪುರದವರಾದ ಪ್ರಜಾಪತಿ ಅವರ ಲೆಕ್ಕಪರಿಶೋಧಕ ಅಮೇಥಿಯಲ್ಲಿ ’ಬೇನಾಮಿ ಆಸ್ತಿ‘ ಹೊಂದಿದ್ದಾರೆ ಎನ್ನಲಾಗಿದೆ. ಆ ಸ್ಥಳಗಳಲ್ಲಿ ಮತ್ತು ಪ್ರಜಾಪತಿ ಅವರ ನಿವಾಸ, ಲಖನೌನಲ್ಲಿರುವ ಕಚೇರಿಯಲ್ಲೂ ಇ.ಡಿ ಶೋಧ ನಡೆಸಿದೆ.

ಪ್ರಜಾಪತಿಯನ್ನು ಮಾರ್ಚ್‌ 15, 2017ರಲ್ಲಿ ಬಂಧಿಸಲಾಗಿತ್ತು. ಸದ್ಯ ಲಖನೌನ ಕೆಜಿಎಂಯು ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷದ ಸರ್ಕಾರದಲ್ಲಿ ಗಾಯತ್ರಿ ಪ್ರಜಾಪತಿ ಸಚಿವರಾಗಿದ್ದರು. ಈ ವೇಳೆ ಅಕ್ರಮವಾಗಿ ಆಸ್ತಿಯನ್ನು ಸಂಪಾದಿಸಿರುವ ಆರೋಪದಡಿ ಇ.ಡಿ ತನಿಖೆ ನಡೆಸುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು