ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಹಣಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಅಲ್ಪಸಂಖ್ಯಾತರ ಅಭಿವೃದ್ಧಿ ಸಚಿವ ನವಾಬ್ ಮಲಿಕ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಚಾರ್ಜ್‌ಶೀಟ್ ಸಲ್ಲಿಸಿದೆ.

ಎನ್‌ಸಿಪಿ ನಾಯಕ ಮಲಿಕ್ ಅವರನ್ನು ಇದೇ ಫೆಬ್ರುವರಿ 23 ರಂದು ಬಂಧಿಸಿದ್ದು, ನ್ಯಾಯಾಂಗ ಕಸ್ಟಡಿಯಲ್ಲಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಪ್ರಕರಣಗಳ (ಪಿಎಂಎಲ್‌ಎ) ವಿಶೇಷ ನ್ಯಾಯಾಲಯಕ್ಕೆ 5,000 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಲಾಗಿದೆ ಎಂದು ಇ.ಡಿ ಪರ ವಕೀಲರು ತಿಳಿಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿ ಮಲಿಕ್ ವಿರುದ್ಧ ಇ.ಡಿ ಪ್ರಕರಣ ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.