ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುಕೋಟಿ ಲಂಚ ಪ್ರಕರಣ: ಮಹಾ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ಗೆ ಇಡಿ ಸಮನ್ಸ್‌

Last Updated 26 ಜೂನ್ 2021, 6:10 IST
ಅಕ್ಷರ ಗಾತ್ರ

ಮುಂಬೈ: ಬಹುಕೋಟಿ ಲಂಚ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರಿಗೆ ವಿಚಾರಣೆಗೆ ಬರುವಂತೆ ಸಮನ್ಸ್‌ ಜಾರಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದ್ದ ಲಂಚ ಮತ್ತು ಸುಲಿಗೆ ಆರೋಪದಲ್ಲಿ ಅಂದಿನ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅವರು ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಲ್ಲಾರ್ಡ್‌ ಎಸ್ಟೇಟ್‌ನಲ್ಲಿರುವ ಇ.ಡಿ ಕಚೇರಿಗೆ 11 ಗಂಟೆಗೆ ಆಗಮಿಸುವಂತೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) 71 ವರ್ಷದ ಅನಿಲ್‌ ದೇಶಮುಖ್‌ ಅವರಿಗೆ ಸಮನ್ಸ್‌ನಲ್ಲಿ ತಿಳಿಸಲಾಗಿದೆ.

ಮುಂಬೈ ಮತ್ತು ನಾಗಪುರದಲ್ಲಿ ದೇಶ್‌ಮುಖ್‌ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ ಶುಕ್ರವಾರ ದಾಳಿ ನಡೆಸಿತ್ತು. ಇದರ ಬೆನ್ನಿಗೇ ಶುಕ್ರವಾರ ರಾತ್ರಿ ದೇಶ್‌ಮುಖ್‌ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಪಲಾಂಡೆ ಮತ್ತು ಸಹಾಯಕ ಕುಂದನ್‌ ಶಿಂದೆ ಅವರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT