ಭಾನುವಾರ, ಏಪ್ರಿಲ್ 2, 2023
31 °C

ಹಣಕಾಸು ಅಕ್ರಮ ಆರೋಪ: ಮೆಹಬೂಬಾ ಮುಫ್ತಿ ತಾಯಿಗೆ ಜಾರಿ ನಿರ್ದೇಶನಾಲಯ ಸಮನ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು–ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ತಾಯಿ ಗುಲ್ಶಾನ್‌ ನಜೀರ್‌ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಶ್ರೀನಗರದಲ್ಲಿರುವ ಕಚೇರಿಗೆ ಜುಲೈ 14ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರಗಳ ಪುನರ್‌ ವಿಂಗಡಣಾ ಆಯೋಗವನ್ನು ಭೇಟಿ ಮಾಡದಿರಲು ಪಿಡಿಪಿ ನಿರ್ಧರಿಸಿದ ಬೆನ್ನಲ್ಲೇ ತಮ್ಮ ತಾಯಿಯವರಿಗೆ ಸಮನ್ಸ್ ನೀಡಿರುವ ಬಗ್ಗೆ ಮೆಹಬೂಬಾ ಮುಫ್ತಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಓದಿ: 

ಸಮನ್ಸ್‌ ಪ್ರತಿಯನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಮುಫ್ತಿ, ‘ನನ್ನ ತಾಯಿಗೆ ತಿಳಿಯದೇ ಇರುವ ಆರೋಪಗಳಿಗಾಗಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ರಾಜಕೀಯ ವಿರೋಧಿಗಳನ್ನು ಬೆದರಿಸುವ ಯತ್ನದಲ್ಲಿ ಕೇಂದ್ರ ಸರ್ಕಾರವು ಹಿರಿಯ ನಾಗರಿಕರನ್ನೂ ಬಿಡುತ್ತಿಲ್ಲ. ಎನ್‌ಐಎ, ಇ.ಡಿಯಂತಹ ಏಜೆನ್ಸಿಗಳು ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿವೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು