ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಟಿ ರಿಯಾ ಚಕ್ರವರ್ತಿ ಅವರ ವಿರುದ್ಧ ಕೇಳಿ ಬಂದಿರುವ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯವು (ಇಡಿ) ಬುಧವಾರ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಆ. 7ರಂದು ವಿಚಾರಣೆಗೆ ಬರುವಂತೆ ಸೂಚಿಸಿದೆ.

ಅದರಂತೆ ಆ.7ರಂದು ರಿಯಾ ಚಕ್ರವರ್ತಿ ಅವರನ್ನು ವಿಚಾರಣೆಗೆ ಒಳಪಡಿಸಲಿರುವ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅನ್ವಯ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.

ನಟ ಸುಶಾಂತ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ತಂದೆ ಕೆಕೆ ಸಿಂಗ್ ಅವರ ದೂರಿನ ಮೇರೆಗೆ ಕಳೆದ ವಾರ ಬಿಹಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅದರ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ರಿಯಾ ಚಕ್ರವರ್ತಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ. ಆತ್ಮಹತ್ಯೆಯಲ್ಲಿ ರಿಯಾ ಮತ್ತು ಕುಟುಂಬಸ್ಥರ ಪಾತ್ರವಿದೆ ಎಂದು ಸುಶಾಂತ್ ತಂದೆ ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ (34) ಅವರು ಜೂನ್ 14 ರಂದು ಮುಂಬೈನ ಬಾಂದ್ರಾದ ತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.