ನವದೆಹಲಿ: ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ನಾಳೆ ಬೆಳಿಗ್ಗೆ ಕೋಲ್ಕತ್ತದ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಣಿಕ್ ಭಟ್ಟಾಚಾರ್ಯ ಅವರಿಗೆ ಸೂಚಿಸಲಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

ಓದಿ...ನನ್ನ ತಂದೆಯ ಭಾವಚಿತ್ರ ಬಳಸಿ ಮತಯಾಚನೆ ಮಾಡಬೇಡಿ: ಶಿಂದೆ ಬಣದ ವಿರುದ್ಧ ಠಾಕ್ರೆ ಗರಂ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ಇ.ಡಿ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದರು.

ಭುವನೇಶ್ವರದ ಏಮ್ಸ್‌ನಲ್ಲಿ ಚಟರ್ಜಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಅವರ ಆರೋಗ್ಯದ ಮೇಲೆ ಯಾವುದೇ ಸಕ್ರಿಯ ನಿಗಾದ ಅಗತ್ಯವಿಲ್ಲ ಎಂದು ವರದಿ ಬಂದಿತ್ತು. ಆ ಬಳಿಕ ಚಟರ್ಜಿಯವರನ್ನು 14 ದಿನಗಳ ಕಸ್ಟಡಿಗೆ ಇ. ಡಿ ಕೋರಿತ್ತು. ಈ ಹಿನ್ನೆಲೆಯಲ್ಲಿ ಕೋಲ್ಕತ್ತ ನ್ಯಾಯಾಲಯವು ಚಟರ್ಜಿ ಮತ್ತು ಅರ್ಪಿತಾ ಅವರನ್ನು 10 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ.

ಓದಿ... ಶಿಕ್ಷಕರ ನೇಮಕಾತಿ ಹಗರಣ: ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದ ಮಮತಾ ಬ್ಯಾನರ್ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.