ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಮತಾ ಸೋದರಳಿಯ ಅಭಿಷೇಕ್‌ಗೆ ಇ.ಡಿ ಸಮನ್ಸ್‌

Last Updated 30 ಆಗಸ್ಟ್ 2022, 8:27 IST
ಅಕ್ಷರ ಗಾತ್ರ

ಕೋಲ್ಕತ್ತ: ಕಲ್ಲಿದ್ದಲು ಹಗರಣದ ತನಿಖೆಗೆ ಸಂಬಂಧಿಸಿದ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್‌ ಅವರನ್ನು ಶುಕ್ರವಾರ ಬೆಳಿಗ್ಗೆ ಕೋಲ್ಕತ್ತದ ಕಚೇರಿಗೆ ಹಾಜರಾಗುವಂತೆ ಕೇಂದ್ರೀಯ ಸಂಸ್ಥೆ ಹೇಳಿದೆ.

‘ವಿಚಾರಣೆಗೆ ಹಾಜರಾಗಲು ನಾವು ಅಭಿಷೇಕ್ ಬ್ಯಾನರ್ಜಿ ಅವರಿಗೆ ತಿಳಿಸಿದ್ದೇವೆ. ಅವರನ್ನು ವಿಚಾರಣೆ ಮಾಡಲು ನವದೆಹಲಿಯಿಂದ ನಮ್ಮ ಅಧಿಕಾರಿಗಳು ಬರುತ್ತಾರೆ‘ ಎಂದು ಇ.ಡಿ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು, ‘ಸೋದರಳಿಯ ಅಭಿಷೇಕ್‌ ಮತ್ತು ಇತರ ಹಿರಿಯ ನಾಯಕರಿಗೆ ಕೇಂದ್ರೀಯ ಸಂಸ್ಥೆಗಳು ನೋಟಿಸ್ ಕಳುಹಿಸುವ ಸಾಧ್ಯತೆಗಳಿವೆ’ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT