ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಹಣ ವರ್ಗಾವಣೆ: ಮಮತಾ ಅಳಿಯ ಅಭಿಷೇಕ್ ಬ್ಯಾನರ್ಜಿಗೆ ಇ.ಡಿ ಸಮನ್ಸ್‌

Last Updated 28 ಆಗಸ್ಟ್ 2021, 9:31 IST
ಅಕ್ಷರ ಗಾತ್ರ

ನವದೆಹಲಿ: ‘ಕಲ್ಲಿದ್ದಲ್ಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ, ಸಂಸದ ಅಭಿಷೇಕ್‌ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್‌ ಜಾರಿ ಮಾಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ಅಭಿಷೇಕ್‌ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ‍ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.

ಪ್ರಕರಣದ ತನಿಖಾ ಅಧಿಕಾರಿ ಮುಂದೆ ಸೆಪ್ಟೆಂಬರ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್‌ ಬ್ಯಾನರ್ಜಿಗೆ ಸಮನ್ಸ್‌ ಜಾರಿ ಮಾಡಿದ್ದರೆ, ಅಭಿಷೇಕ್ ಪತ್ನಿ ರುಜಿರಿಯಾಗೆ ಸೆಪ್ಟೆಂಬರ್‌ 1ರಂದು ಹಾಜರಾಗುವಂತೆ ಸೂಚಿಸಲಾಗಿದೆ.

‘ಈ ಪ್ರಕರಣ ಸಂಬಂಧ ಇತರ ಕೆಲ ವ್ಯಕ್ತಿಗಳಿಗೂ ಮುಂದಿನ ತಿಂಗಳ ಬೇರೆ–ಬೇರೆ ದಿನಾಂಕಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT