ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಇ.ಡಿ.ಯಿಂದ ಭಾರಿ ಕಾರ್ಯಾಚರಣೆ: ರಾವುತ್

Last Updated 22 ಮಾರ್ಚ್ 2022, 15:13 IST
ಅಕ್ಷರ ಗಾತ್ರ

ಮುಂಬೈ: ಬಿಜೆಪಿಯೇತರ ಪಕ್ಷಗಳ ಸರ್ಕಾರಗಳು ಇರುವ ರಾಜ್ಯಗಳಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಭಾರಿ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಆರೋಪಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹತ್ತಿರದ ಸಂಬಂಧಿ ಶ್ರೀಧರ್ ಮಾಧವ್ ಪಟಾನ್‌ಕರ್ ಒಡೆತನದ ಕಪನಿಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದ ಬೆನ್ನಲ್ಲೇ ರಾವುತ್ ಅವರು ತನಿಖಾ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀಧರ್ ಮಾಧವ್ ಪಟಾನ್‌ಕರ್ ನಮ್ಮ ಕುಟುಂಬದ ಸದಸ್ಯರು. ಅವರ ಸಂಬಂಧ ಉದ್ಧವ್ ಠಾಕ್ರೆ ಅವರಿಗಷ್ಟೇ ಸೀಮಿತವಾಗಿಲ್ಲ. ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲೆಲ್ಲ ಬಿಜೆಪಿ ಭಾರಿ ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ರಾವುತ್ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಗುಜರಾತ್‌ನಂಥ ರಾಜ್ಯಗಳಲ್ಲಿ ಜಾರಿ ನಿರ್ದೇಶನಾಲಯ ಕಚೇರಿಗಳನ್ನು ಮುಚ್ಚಿರುವಂತಿದೆ. ಮಹಾರಾಷ್ಟ್ರದಲ್ಲಿ ಎಲ್ಲವೂ ನಡೆಯುತ್ತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಮೇಲೂ ದೌರ್ಜನ್ಯ ನಡೆಯುತ್ತಿದೆ. ಆದರೆ ಬಂಗಾಳವೂ ತಲೆಬಾಗದು, ಮಹಾರಾಷ್ಟ್ರದಲ್ಲೂ ಒಡಕು ಉಂಟಾಗದು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT