ನವದೆಹಲಿ: ರೈತರ ಟ್ರ್ಯಾಕ್ಟರ್ ರ್ಯಾಲಿಯ ವರದಿಗೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತರು, ಸಂಪಾದಕರ ವಿರುದ್ಧ ಎಫ್ಐಆರ್ ದಾಖಲಿಸಿರುವ ಕ್ರಮವನ್ನು ಭಾರತೀಯ ಸಂಪಾದಕರ ಒಕ್ಕೂಟ ಖಂಡಿಸಿದೆ. ಇದು, ಬೆದರಿಕೆಯೊಡ್ಡುವ ಹಾಗೂ ಕಿರುಕುಳ ನೀಡುವ ಉದ್ದೇಶವನ್ನು ಒಳಗೊಂಡಿದೆ ಎಂದು ಆಕ್ಷೇಪಿಸಿದೆ.

ಈ ಕುರಿತು ನೀಡಿರುವ ಹೇಳಿಕೆಯಲ್ಲಿ ಒಕ್ಕೂಟವು, ಕೂಡಲೇ ಎಫ್ಐಆರ್ ಅನ್ನು ರದ್ದುಪಡಿಸಬೇಕು ಹಾಗೂ ನಿರ್ಭೀತ ಪರಿಸರದಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದೆ.

ರ್ಯಾಲಿ ವೇಳೆ ರೈತರೊಬ್ಬರ ಸಾವು ಪ್ರಕರಣದ ವರದಿಗೆ ಸಂಬಂಧಿಸಿ ಪತ್ರಕರ್ತರು ಹಾಗೂ ಅವರು ಪ್ರತಿನಿಧಿಸುವ ಸಂಸ್ಥೆಗಳನ್ನು ಗುರಿಯಾಗಿಸಿ ಕ್ರಮ ಜರುಗಿಸಲಾಗುತ್ತಿದೆ. ಘಟನೆ ನಡೆದ ದಿನ ಪೊಲೀಸರು ಸೇರಿದಂತೆ ವಿವಿಧ ಆಯಾಮಗಳಿಂದ ಸುದ್ದಿ ಹೊರಹೊಮ್ಮುತ್ತಿತ್ತು. ಸಹಜವಾಗಿಯೇ ಪತ್ರಕರ್ತರು ಅದನ್ನು ವರದಿ ಮಾಡಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ... ಶಶಿ ತರೂರ್ ಮತ್ತು ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.