ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಜಾದ್ ಕಾಶ್ಮೀರ’ ಕುರಿತ ಪ್ರಶ್ನೆ: ಬಂಗಾಳದಿಂದ ವರದಿ ಕೇಳಿದ ಶಿಕ್ಷಣ ಸಚಿವಾಲಯ

Last Updated 18 ಜನವರಿ 2023, 13:03 IST
ಅಕ್ಷರ ಗಾತ್ರ

ನವದೆಹಲಿ: 10ನೇ ತರಗತಿಯ ಮಾದರಿ ಪ್ರಶ್ನೆಪತ್ರಿಕೆಯಲ್ಲಿ ವಿದ್ಯಾರ್ಥಿಗಳಿಗೆ ನಕ್ಷೆಯಲ್ಲಿ ‘ಆಜಾದ್ ಕಾಶ್ಮೀರ’ ಗುರುತಿಸುವಂತೆ ಕೇಳಿರುವ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆ ಕೇಂದ್ರ ಶಿಕ್ಷಣ ಸಚಿವಾಲಯವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

‘ಪಶ್ಚಿಮ ಬಂಗಾಳ ಪ್ರೌಢ ಶಿಕ್ಷಣ ಮಂಡಳಿಯ 10ನೇ ತರಗತಿಯ ಪ್ರಶ್ನೆ ಪತ್ರಿಕೆಯಲ್ಲಿ ಈ ಬಗ್ಗೆ ಪ್ರಶ್ನೆ ಕೇಳಿರುವುದನ್ನು ಸಚಿವಾಲಯವು ಗಂಭೀರವಾಗಿ ಪರಿಗಣಿಸಿದೆ’ ಎಂದು ತಿಳಿಸಿವೆ.

ಭಾರತದ ನಕ್ಷೆಯಲ್ಲಿ ‘ಆಜಾದ್ ಕಾಶ್ಮೀರ’ ಗುರುತಿಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ರಾಜಕೀಯವಾಗಿ ಚರ್ಚೆಗಳು ಶುರುವಾಗಿವೆ. ಪ್ರತಿಪಕ್ಷ ಬಿಜೆಪಿ ಇದನ್ನು ‘ಜಿಹಾದಿ ಪಿತೂರಿ’ ಎಂದು ಆರೋಪಿಸಿದೆ.

ಸ್ವಾಯತ್ತ ಸಂಸ್ಥೆ ಪ್ರಕಟಿಸಿದ ಪ್ರಶ್ನೆ ಪತ್ರಿಕೆಯಲ್ಲಿ ತಪ್ಪಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಪ್ರೌಢ ಶಿಕ್ಷಣ ಮಂಡಳಿ ಅಧ್ಯಕ್ಷ ರಾಮಾನುಜ್ ಗಂಗೂಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT