ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಭ ಗಳಿಸಲು ಶಿಕ್ಷಣವೆಂಬುದು ವ್ಯಾಪಾರವಲ್ಲ: ‘ಸುಪ್ರೀಂಕೋರ್ಟ್‌’

Last Updated 8 ನವೆಂಬರ್ 2022, 10:32 IST
ಅಕ್ಷರ ಗಾತ್ರ

ನವದೆಹಲಿ: ಶಿಕ್ಷಣ ಎಂಬುದು ಲಾಭ ಗಳಿಸುವ ಸಲುವಾಗಿ ನಡೆಸುವ ವ್ಯಾಪಾರವಲ್ಲ. ಹೀಗಾಗಿ ಬೋಧನಾ ಶುಲ್ಕವು ಯಾವಾಗಲೂ ಕೈಗೆಟುಕುವಂತಿರಬೇಕು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠ, ರಾಜ್ಯದ ಮೆಡಿಕಲ್‌ ಕಾಲೇಜುಗಳ ಬೋಧನಾ ಶುಲ್ಕವನ್ನು ವಾರ್ಷಿಕ ₹ 24 ಲಕ್ಷಕ್ಕೆ ಹೆಚ್ಚಳ ಮಾಡಿದ್ದ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್‌ನ ಕ್ರಮವನ್ನು ಎತ್ತಿ ಹಿಡಿಯಿತು.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್‌ ಕಾಲೇಜು ಹಾಗೂ ಆಂಧ್ರಪ್ರದೇಶ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು.

ನಾರಾಯಣ ಮೆಡಿಕಲ್‌ ಕಾಲೇಜು ಹಾಗೂ ರಾಜ್ಯ ಸರ್ಕಾರ ಪ್ರಕರಣದ ವೆಚ್ಚ ಒಟ್ಟು ₹ 5 ಲಕ್ಷ ನೀಡಬೇಕು ಎಂದು ಆದೇಶಿಸಿದ ನ್ಯಾಯಪೀಠ, ಈ ಮೊತ್ತವನ್ನು ಆರು ವಾರಗಳ ಒಳಗಾಗಿ ಕೋರ್ಟ್‌ ರಿಜಿಸ್ಟ್ರಿಯಲ್ಲಿ ಠೇವಣಿ ಇಡುವಂತೆ ಸೂಚಿಸಿತು.

‘ಬೋಧನಾ ಶುಲ್ಕವನ್ನು ₹ 24 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದು ಈ ಮೊದಲಿದ್ದ ಶುಲ್ಕಕ್ಕಿಂತ ಏಳು ಪಟ್ಟು ಹೆಚ್ಚು ಇದ್ದು, ಯಾವ ರೀತಿಯಲ್ಲಿಯೂ ಈ ಕ್ರಮ ಸಮರ್ಥನೀಯವಲ್ಲ’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT