ಮಂಗಳವಾರ, ನವೆಂಬರ್ 24, 2020
21 °C

ರೈಲ್ವೆ ಪ್ರಯಾಣಿಕರ ವಲಯದ ಆದಾಯದಲ್ಲಿ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತೀಯ ರೈಲ್ವೆ

ನವದೆಹಲಿ: ಕೋವಿಡ್‌–19 ಸಾಂಕ್ರಾಮಿಕ ಕಾಯಿಲೆಯಿಂದ ಭಾರತೀಯ ರೈಲ್ವೆಯ ಆದಾಯಕ್ಕೂ ಕುತ್ತು ತಂದಿದೆ. ಪ್ರಯಾಣಿಕರ ವಲಯದಿಂದ ಬರುವ ಆದಾಯದಲ್ಲಿ ಶೇಕಡ 90ರಷ್ಟು ಕುಸಿದಿದೆ.

‘ಪ್ರಸಕ್ತ ಹಣಕಾಸು ವರ್ಷದಲ್ಲಿ ರೈಲ್ವೆ ಇಲಾಖೆಗೆ ಪ್ರಯಾಣಿಕರಿಂದ ಕೇವಲ ₹3,322 ಕೋಟಿ ಮಾತ್ರ ಆದಾಯ ದೊರೆತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡ 90ರಷ್ಟು ಕಡಿಮೆಯಾಗಿದೆ’ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿ.ಕೆ. ಯಾದವ್‌ ತಿಳಿಸಿದ್ದಾರೆ.

ಕೋವಿಡ್‌ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಮಾರ್ಚ್‌ 24ರಿಂದ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಪ್ರಸ್ತುತ ಪ್ಯಾಸೆಂಜರ್‌ ರೈಲುಗಳು ಮತ್ತು ಸರಕು ಸಾಗಾಣಿಕೆ ರೈಲುಗಳು ಮಾತ್ರ ಕಾರ್ಯಾಚರಣೆ ನಡೆಸುತ್ತಿವೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಸರಕು ಸಾಗಾಣಿಕೆಯ ಆದಾಯದಲ್ಲಿ ಶೇಕಡ 9ರಷ್ಟು ವೃದ್ಧಿಯಾಗಿದೆ ಎಂದು ಯಾದವ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು