ಶುಕ್ರವಾರ, ಫೆಬ್ರವರಿ 3, 2023
23 °C

ಗಣರಾಜ್ಯೋತ್ಸವಕ್ಕೆ ಈಜಿಪ್ಟ್‌ ಅಧ್ಯಕ್ಷ ಮುಖ್ಯ ಅತಿಥಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವಕ್ಕೆ ಈಜಿಪ್ಟ್‌ ಅಧ್ಯಕ್ಷ ಅಬ್ದೆಲ್‌ ಫತ್ತಾಹ್‌ ಅಲ್‌–ಸಿಸಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.

‘ಇದೇ ಮೊದಲ ಬಾರಿಗೆ ಅರಬ್‌ ರಿಪಬ್ಲಿಕ್‌ ಆಫ್‌ ಈಜಿಪ್ಟ್‌ ಅಧ್ಯಕ್ಷರು ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಮೂಲಕ  ಅ.16ರಂದು ಸಿಸಿ ಅವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿಕೊಟ್ಟಿದ್ದರು. ಉಭಯ ದೇಶಗಳ ರಾಜತಾಂತ್ರಿಕ ಸಂಬಂಧಕ್ಕೆ 75 ವರ್ಷಗಳು ಸಂದಿವೆ’ ಎಂದು ಅದು ತಿಳಿಸಿದೆ. ಭಾರತವು ಜಿ–20 ಅಧ್ಯಕ್ಷ ಸ್ಥಾನ ವಹಿಸುವ 2022–23ರ ಅವಧಿಯಲ್ಲಿ ಅತಿಥಿ ರಾಷ್ಟ್ರವಾಗಿ ಈಜಿಪ್ಟ್‌ ಅನ್ನು ಆಹ್ವಾನಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು