ಶುಕ್ರವಾರ, ಮೇ 7, 2021
26 °C
ಆಮ್ಲಜನಕ ಪೂರೈಕೆಯಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯ: ಸಂಬಂಧಿಕರ ಆರೋಪ

ಹಿಂದೂಪುರ: ಆಸ್ಪತ್ರೆಯಲ್ಲಿ ಎಂಟು ರೋಗಿಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಹೈದರಾಬಾದ್‌: ಹಿಂದೂಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿದ್ದ ಎಂಟು ಮಂದಿ ಕೋವಿಡ್‌ ರೋಗಿಗಳು ಸೋಮವಾರ ಮೃತಪಟ್ಟಿದ್ದು, ಆಮ್ಲಜನಕದ ಸರಬರಾಜಿನಲ್ಲಿ ವ್ಯತ್ಯಯ ಆಗಿರುವುದೇ ಇವರ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

‘ತುರ್ತು ಸಂರ್ಭದಲ್ಲಿ ಬಳಸುವ ಸಲುವಾಗಿ ಆಸ್ಪತ್ರೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಮ್ಲಜನಕದ ಸಿಲಿಂಡರ್‌ಗಳನ್ನು ಬಳಸಿ ರೋಗಿಗಳಿಗೆ ಆಮ್ಲಜನಕ ನೀಡಲು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರಿಂದ ಘಟನೆ ಸಂಭವಿಸಿದೆ’ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ.

ಆದರೆ ಈ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಆಮ್ಲಜನಕ ಮೇಲ್ವಿಚಾರಣಾ ಅಧಿಕಾರಿಯಾಗಿರುವ ಅನಂತಪುರಂ ಜಿಲ್ಲಾ ಅರಣ್ಯ ರಕ್ಷಣಾಧಿಕಾರಿ ಜಗನ್ನಾಥ್‌ ಸಿಂಗ್‌ ಹೇಳಿದ್ದಾರೆ. ‘ರೋಗಿಗಳ ಸಾವಿಗೆ ಆಮ್ಲಜನಕದ ಕೊರತೆ ಕಾರಣವಲ್ಲ. ಈ ರೋಗಿಗಳ ಸ್ಥಿತಿ ತೀರಾ ಗಂಭೀರವಾಗಿತ್ತು. ಕೆಲವರ ಆಮ್ಲಜನಕದ ಪ್ರಮಾಣವು ಶೇ 50–60ರಷ್ಟಿತ್ತು’ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು