ಮಂಗಳವಾರ, ಮಾರ್ಚ್ 28, 2023
23 °C

ಬಿಹಾರ: ನಕಲಿ ಮದ್ಯ ಸೇವಿಸಿ 8 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಟ್ಟಿಯಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಎಂಟು ಮಂದಿ ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿದ್ದಾರೆ.

ಮೃತಪಟ್ಟವರೆಲ್ಲರೂ ತೆಲ್ಹುವಾ ಗ್ರಾಮದವರು. ಬುಧವಾರ ಸಂಜೆ ಚಮರ್ತೋಲಿ ಪ್ರದೇಶದಲ್ಲಿ ಮದ್ಯ ಸೇವಿಸಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಮೃತಪಟ್ಟ ಎಂಟು ಮಂದಿಯನ್ನು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಉಪೇಂದ್ರ ನಾಥ್ ವರ್ಮಾ, ‘ಇದೊಂದು ಅಸಹಜ ಸಾವಿನ ಪ್ರಕರಣ. ಪ್ರಾಥಮಿಕ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ’ ಎಂದು ಹೇಳಿದ್ದಾರೆ.

ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.

‘ಮದ್ಯ ಸೇವಿಸಿದ ನಂತರ ಜನರು ಅಸ್ವಸ್ಥಗೊಂಡರು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೆಳಿಗ್ಗೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹೆಸರು ಬಯಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು, ಮುಜಾಫರ್‌ಪುರದಲ್ಲಿ ಇದೇ ರೀತಿಯ ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದರು. ನಿತೀಶ್ ಕುಮಾರ್ ಸರ್ಕಾರವು 2016ರ ಏಪ್ರಿಲ್ 5ರಂದು ರಾಜ್ಯದಲ್ಲಿ ಮದ್ಯದ ತಯಾರಿಕೆ, ವ್ಯಾಪಾರ, ಸಂಗ್ರಹಣೆ, ಸಾಗಣೆ, ಮಾರಾಟ ಮತ್ತು ಸೇವನೆ ನಿಷೇಧಿಸಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು