ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯ ಪ್ರದೇಶ: ವಿದೇಶದಿಂದ ಬಂದ 8 ಜನರಿಗೆ ಓಮೈಕ್ರಾನ್-ಆರೋಗ್ಯ ಇಲಾಖೆ

Last Updated 27 ಡಿಸೆಂಬರ್ 2021, 8:43 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ 8 ಜನರಿಗೆ ಕೊರೊನಾ ವೈರಸ್ ರೂಪಾಂತರ ತಳಿ ಓಮೈಕ್ರಾನ್ ಸೋಂಕು ತಗುಲಿದೆಎಂದು ಆರೋಗ್ಯ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಸೋಂಕಿತರಲ್ಲಿ ಮೂವರು ಅಮೆರಿಕದಿಂದ, ಇಂಗ್ಲೆಂಡ್ ಮತ್ತು ತಾಂಜೇನಿಯಾದ ತಲಾ ಇಬ್ಬರು ಹಾಗೂ ಘಾನಾದಿಂದ ಒಬ್ಬರು ಇಂದೋರ್‌ಗೆ ಬಂದಿದ್ದರು.

ಇದೇ ಮೊದಲ ಬಾರಿಗೆ ಮಧ್ಯ ಪ್ರದೇಶದ ಸರ್ಕಾರ ಅಧಿಕೃತವಾಗಿ ರಾಜ್ಯದ ಓಮೈಕ್ರಾನ್ ಪ್ರಕರಣಗಳನ್ನು ದೃಢಪಡಿಸಿದೆ. 'ಇಂದೋರ್‌ನಲ್ಲಿ 8 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 6 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ' ಎಂದು ಸರ್ಕಾರದ ವಕ್ತಾರ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.

ಇತ್ತೀಚೆಗೆ ವಿದೇಶಗಳಿಂದ ಸುಮಾರು 3 ಸಾವಿರ ಜನರು ಇಂದೋರ್‌ಗೆ ಬಂದಿದ್ದಾರೆ. ಡಿಸೆಂಬರ್ 17 ಮತ್ತು 21ರ ನಡುವೆ ವಿವಿಧ ದೇಶಗಳಿಂದ ಬಂದಿದ್ದವರೆಲ್ಲರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 26 ಜನರಿಗೆ ಕೋವಿಡ್-19 ದೃಢಪಟ್ಟಿದೆ ಮತ್ತು 8 ಜನರಿಗೆ ಓಮೈಕ್ರಾನ್ ಇರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಡಿಸೆಂಬರ್ 23ರಿಂದ ರಾಜ್ಯದಲ್ಲಿ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಕೋವಿಡ್ ಸ್ಥಿತಿಗತಿಗಳನ್ನು ಆಧರಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ನಿರ್ಬಂಧ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT