ಸೋಮವಾರ, ಆಗಸ್ಟ್ 8, 2022
24 °C

ಮುಂಬೈ: 4 ಅಂತಸ್ತಿನ ಕಟ್ಟಡ ಕುಸಿತ– ಇಬ್ಬರ ಸಾವು, 12 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಇಲ್ಲಿನ ಕುರ್ಲಾ ಪ್ರದೇಶದ 4 ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಇಬ್ಬರು ಮೃತಪಟ್ಟು ಕನಿಷ್ಠ 12 ಮಂದಿ ಗಾಯಗೊಂಡಿರುವುದಾಗಿ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಯಕ್ ನಗರ ಸೊಸೈಟಿಯಲ್ಲಿರುವ ಕಟ್ಟಡದ ಒಂದು ಭಾಗ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ರಾಜವಾಡಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. 

ಅವಶೇಷಗಳಡಿ ಇನ್ನೂ 20-25 ಮಂದಿ ಸಿಲುಕಿರುವ ಸಾಧ್ಯತೆ ಇದೆ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು