ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19: ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಸೋಂಕು ಹೆಚ್ಚಳ

Last Updated 20 ಮಾರ್ಚ್ 2021, 10:23 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ದೇಶದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಳಿತ ಪ್ರದೇಶಗಳಲ್ಲಿ ನಿತ್ಯ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ಏರುತ್ತಿರುವುದು ಕಾಣುತ್ತಿದ್ದರೆ, ಕೇರಳದಲ್ಲಿ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವುದು ಕಾಣುತ್ತಿದೆ‘ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ದೇಶದ ಒಟ್ಟು ಪ್ರಕರಣಗಳ ಪೈಕಿ, ಶೇ 76.22 ರಷ್ಟು ಮಹಾರಾಷ್ಟ್ರ, ಕೇರಳ ಮತ್ತು ಪಂಜಾಬ್‌ ರಾಜ್ಯಗಳಲ್ಲೇ ಇವೆ. ಮಹಾರಾಷ್ಟ್ರದಲ್ಲಿ ಶೇ 62 ಪ್ರಕರಣಗಳಿದ್ದರೆ, ಕೇರಳ ಮತ್ತು ಪಂಜಾಬ್‌ನಲ್ಲಿ ಕ್ರಮವಾಗಿ ಶೇ 8.83 ಮತ್ತು ಶೇ 5.36ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಪುಣೆಯಲ್ಲಿ 37,384, ನಾಗಪುರದಲ್ಲಿ 25,861, ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ 18,850, ಠಾಣೆ ಜಿಲ್ಲೆಯಲ್ಲಿ 16,735 ಮತ್ತು ನಾಸಿಕ್ ಜಿಲ್ಲೆಯಲ್ಲಿ 11,867 – ಇವು ಅತಿ ಹೆಚ್ಚು ಹೊಸ ಪ್ರಕರಣಗಳು ದಾಖಲಾದ ಮಹಾರಾಷ್ಟ್ರದ ಐದು ಜಿಲ್ಲೆಗಳಾಗಿವೆ.

‌ಐದು ರಾಜ್ಯಗಳಲ್ಲಿ ಹೊಸ ಕೊರೊನಾ ಸೋಂಕಿನಿಂದ ಸಂಭವಿಸಿರುವ ಸಾವಿನ ಪ್ರಮಾಣ ಶೇ 81.38ರಷ್ಟು. ಈ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಮುಂದಿದೆ. ಕಳೆದ 24 ಗಂಟೆಗಳಲ್ಲಿ ದೇಶದ ಹದಿನೈದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT