ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್ಪುರ: ಪ್ರವಾದಿಗೆ ಅವಮಾನ ಮಾಡಿದ ಆರೋಪ, 18 ಮಂದಿ ಸೆರೆ

Last Updated 3 ಜೂನ್ 2022, 19:32 IST
ಅಕ್ಷರ ಗಾತ್ರ

ಕಾನ್ಪುರ(ಉತ್ತರ ಪ್ರದೇಶ): ದೂರದರ್ಶನದ ಚರ್ಚೆಯೊಂದ
ರಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಉದ್ರಿಕ್ತ ಜನರ ಗುಂಪು ಬಲವಂತವಾಗಿ ಅಂಗಡಿಗಳನ್ನು ಬಂದ್‌ ಮಾಡಿಸಲು ಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದು, ಎರಡು ಗುಂಪುಗಳು ಪರಸ್ಪರ ಬಾಂಬ್‌ ಎಸೆದು, ಕಲ್ಲು ತೂರಾಟ ನಡೆಸಿವೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಈ ಸಂಬಂಧ 18 ಮಂದಿಯನ್ನು ಬಂಧಿಸಲಾಗಿದೆ.

ಶುಕ್ರವಾರದ ಪ್ರಾರ್ಥನೆ ಬಳಿಕಪರೇದ್, ನೈಸಡಕ್ ಮತ್ತು ಯತೀಂಖಾನ ಪ್ರದೇಶದಲ್ಲಿ ಘರ್ಷಣೆ ನಡೆದಿದೆ. ಇತ್ತೀಚೆಗೆ ದೂರದರ್ಶನದ ಚರ್ಚೆಯೊಂದ
ರಲ್ಲಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಅವಹೇಳನಕಾರಿ ಹೇಳಿಕೆ ನೀಡಿ ದ್ದಾರೆ ಎಂದು ಆರೋಪಿಸಿ, ಒಂದು ಗುಂಪಿನ ಸದಸ್ಯರು ಅಂಗಡಿಗಳನ್ನು ಬಲ ವಂತವಾಗಿ ಮುಚ್ಚಲು ಪ್ರಯತ್ನಿಸಿದಾಗ, ಮತ್ತೊಂದು ಗುಂಪಿನ ಕಡೆಯವರು ಬಾಂಬ್ ಎಸೆದು, ಗುಂಡು ಹಾರಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಂಗಡಿಗಳನ್ನು ಮುಚ್ಚುವಂತೆ ವ್ಯಾಪಾರಿಗಳನ್ನು ಒತ್ತಾಯಿಸಿದ ಗುಂಪು ಪೊಲೀಸರೊಂದಿಗೆ ಘರ್ಷಣೆ ನಡೆಸಿತು. ನಂತರ ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಘಟನೆಯ ವಿಡಿಯೊ ತುಣುಕು ಆಧರಿಸಿ ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದ್ದು, ಗೂಂಡಾ ಕಾಯ್ದೆ ಯಡಿ ಪ್ರಕರಣ ದಾಖಲಿಸಿ, ಅವರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ‌ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಸ್ಥಳೀಯ ನಾಯಕರು ಸೇರಿದಂತೆ ಮೌಲಾನಾ ಮೊಹಮ್ಮದ್ ಅಲಿ (ಎಂಎಂಎ) ಜೌಹರ್ ಅಭಿಮಾನಿಗಳ ಸಂಘದ ಮುಖ್ಯಸ್ಥ ಹಯಾತ್ ಜಾಫರ್ ಹಶ್ಮಿ ಅವರು ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರು. ಅಲ್ಲದೆ ನಗರದಲ್ಲಿ ಮೆರವಣಿಗೆ ನಡೆಸಿದ ವೇಳೆಇತರ ಸಮುದಾಯದ ಸದಸ್ಯರನ್ನು ಎದುರಿಸಿದರು. ಇದರ ಪರಿಣಾಮ ಘರ್ಷಣೆಗಳು ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪೊಲೀಸ್ ಮತ್ತು ಗುಪ್ತಚರ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ.ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ ನಗರದಲ್ಲಿದ್ದಾಗ ನೂಪುರ್ ಶರ್ಮಾ ನೀಡಿದ ಪ್ರಚೋದನಕಾರಿ ಹೇಳಿಕೆ ಅಶಾಂತಿ ಸೃಷ್ಟಿಸಿದೆ. ಬಿಜೆಪಿ ನಾಯಕರನ್ನು ಬಂಧಿಸ ಬೇಕು’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಎಂದು ಟ್ವೀಟ್‌ನಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT