ಬುಧವಾರ, ಸೆಪ್ಟೆಂಬರ್ 28, 2022
26 °C

ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಬಿಜೆಪಿ ಹೈಕಮಾಂಡ್ ಜೊತೆ ಶಿಂದೆ ಚರ್ಚೆ ಸಾಧ್ಯತೆ

ಐಎಎಸ್‌ಎಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಆರಂಭವಾಗಿದೆ. ಈ ನಡುವೆ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ನವದೆಹಲಿಯಲ್ಲಿ ಭಾನುವಾರ ನಡೆಯುತ್ತಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ.

ಶಿಂದೆ ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದ್ದಾರಾದರೂ, ಅವರು (ಶಿಂದೆ) ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌, ಬಿಜೆಪಿಯ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿಂದೆ ಹಾಗೂ ಫಡಣವೀಸ್‌ ಪ್ರಮಾಣವಚನ ಸ್ವೀಕರಿಸಿ 35 ದಿನಗಳು ಕಳೆದಿವೆ. ಆದಾಗ್ಯೂ ಸಂಪುಟ ವಿಸ್ತರಣೆ ಕಾರ್ಯ ನಡೆದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಟೀಕಾಪ್ರಹಾರ ನಡೆಸುತ್ತಿವೆ.

ಇದನ್ನೂ ಓದಿ: 

ಸಂಭಾವ್ಯ ಸಚಿವರ ಪಟ್ಟಿ ಸಿದ್ಧಗೊಂಡಿದೆ. ಬಿಜೆಪಿ ಹೈಕಮಾಂಡ್‌ ಅದಕ್ಕೆ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎನ್ನಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಮಹಾ ವಿಕಾಸ ಆಘಾಡಿ (ಶಿವಸೇನಾ, ಕಾಂಗ್ರೆಸ್‌ ಮತ್ತು ಎನ್‌ಸಿಪಿ) ಸರ್ಕಾರದ ವಿರುದ್ಧ ಶಿಂದೆ ನೇತೃತ್ವದಲ್ಲಿ ಶಿವಸೇನಾದ ಹಲವು ಶಾಸಕರು ಬಂಡಾಯ ಸಾರಿದ್ದರು. ಅದಾದ ಬಳಿಕ ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ಜೂನ್ 29ರಂದು ರಾಜೀನಾಮೆ ನೀಡಿದ್ದರು. ಬಳಿಕ, ಶಿಂದೆ ಅವರು ಬಿಜೆಪಿಯ ಬೆಂಬಲದೊಂದಿಗೆ ಜೂನ್‌ 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು