ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಸೇನಾ ತೊರೆದಿಲ್ಲ, ಆ ಬಗ್ಗೆ ಯೋಚಿಸಿಲ್ಲ: ಗುವಾಹಟಿಯಲ್ಲಿ ಏಕನಾಥ್ ಶಿಂಧೆ ಹೇಳಿಕೆ

ಅಕ್ಷರ ಗಾತ್ರ

ಗುವಾಹಟಿ:ಶಿವಸೇನಾ ತೊರೆದಿಲ್ಲ, ಆ ಬಗ್ಗೆ ಯೋಚಿಸಿಲ್ಲ ಎಂದು ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ.

ಸೂರತ್‌ನಿಂದ ಶಿಂಧೆ ಮತ್ತು ಬೆಂಬಲಿಗ ಶಾಸಕರು, ಚಾರ್ಟರ್ಡ್ ವಿಮಾನದಲ್ಲಿ ಗುವಾಹಟಿಗೆ ಬಂದಿದ್ದು, ಈ ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಶಿಂಧೆ, ‘40 ಶಾಸಕರು ನನ್ನೊಂದಿಗೆ ಇದ್ದಾರೆ. ಇನ್ನೂ 10 ಶಾಸಕರು ಶೀಘ್ರದಲ್ಲೇ ನಮ್ಮನ್ನು ಸೇರಿಕೊಳ್ಳಲಿದ್ದಾರೆ. ನಾನು ಯಾರನ್ನೂ ಟೀಕಿಸುತ್ತಿಲ್ಲ. ದಿವಂಗತ ಬಾಳಾಸಾಹೇಬ್ ಠಾಕ್ರೆ ಸ್ಥಾಪಿಸಿದ್ದ ಸೇನಾವನ್ನು ಮುಂದುವರಿಸಲು ನಾವು ಉತ್ಸುಕರಾಗಿದ್ದೇವೆ’ ಎಂದು ಹೇಳಿದ್ದಾರೆ.

‘ನಾವೆಲ್ಲ ಬಾಳಾಸಾಹೇಬ್ ಠಾಕ್ರೆ ಅನುಯಾಯಿಗಳು. ನಾವು ಶಿವಸೇನಾ ತೊರೆದಿಲ್ಲ ಹಾಗೂ ಆ ಬಗ್ಗೆ ಯೋಚಿಸಿಯೂ ಇಲ್ಲ. ಹಿಂದೂ ಎಂದು ಗರ್ವದಿಂದ ಹೇಳಿ ಎಂಬ ಬಾಳಾಸಾಹೇಬ್ ಠಾಕ್ರೆ ಹೇಳಿಕೆಯನ್ನು ನಾನು ನೆನಪಿಸಿಕೊಳ್ಳುತ್ತೇನೆ’ ಎಂದು ಸೂರತ್‌ನಿಂದ ಹೊರಡುವ ಮುನ್ನ ಶಿಂಧೆ ಹೇಳಿದ್ದರು.

ಸೋಮವಾರ ತಡರಾತ್ರಿ ಶಿಂಧೆ ಅವರು ಕೆಲವು ಶಾಸಕರೊಂದಿಗೆ ಮುಂಬೈಯಿಂದ ಗುಜರಾತ್‌ನ ಸೂರತ್‌ನ ಹೋಟೆಲ್‌ಗೆ ತೆರಳಿದ್ದರು.

ಈ ಮಧ್ಯೆ, ಮಹಾರಾಷ್ಟ್ರದಲ್ಲಿ ಇಂದು (ಬುಧವಾರ) ಮಧ್ಯಾಹ್ನ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಶಿಂಧೆ ಅವರಜತೆಗೆ 14–15 ಶಾಸಕರು ಇದ್ದಾರೆ ಎಂದು ಸೇನಾ ಸಂಸದ ಸಂಜಯ ರಾವುತ್‌ ಮಂಗಳವಾರ ಹೇಳಿದ್ದರು.ವಿಧಾನಸಭೆಯಲ್ಲಿ ಶಿವಸೇನಾದ ನಾಯಕ ಹುದ್ದೆಯಿಂದ ಶಿಂಧೆ ಅವರನ್ನು ವಜಾ ಮಾಡಲಾಗಿದೆ. ಅಜಯ್‌ ಚೌಧರಿ ಅವರನ್ನು ಈ ಸ್ಥಾನಕ್ಕೆ ನೇಮಿಸಲಾಗಿದೆ ಎಂದೂ ಅವರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT