ಶುಕ್ರವಾರ, ಏಪ್ರಿಲ್ 23, 2021
28 °C

ಸಿಆರ್‌ಪಿಎಫ್‌ ಬಿಜೆಪಿಯ ಕೈಗೊಂಬೆ: ಮಮತಾ ಬ್ಯಾನರ್ಜಿ ಆರೋಪ

ಪಿಟಿಐ‌ Updated:

ಅಕ್ಷರ ಗಾತ್ರ : | |

ಬಾನೇಶ್ವರ್‌: ‘ಬಿಜೆಪಿಯ ಸಿಆರ್‌ಪಿಎಫ್‌’ನವರು (ಕೇಂದ್ರ ಮೀಸಲು ಪೊಲೀಸ್‌ ಪಡೆ) ಜನರನ್ನು ಮತಗಟ್ಟೆಗಳಿಗೆ ಹೋಗುವುದನ್ನು ತಡೆಯುವುದಲ್ಲದೆ, ಕಿರುಕುಳ ನೀಡುವುದು ಮತ್ತು ಅವರ ಹತ್ಯೆ ಮಾಡುವುದರಲ್ಲೂ ತೊಡಗಿದ್ದಾರೆ. ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರ ಸೂಚನೆಯ ಮೇರೆಗೆ ಅವರು ಹೀಗೆ ನಡೆದುಕೊಳ್ಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬುಧವಾರ ಇಲ್ಲಿ ಆಯೋಜಿಸಿದ್ದ ಪಕ್ಷದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ‘ಕೇಂದ್ರೀಯ ಪಡೆಗಳು ಮಹಿಳೆಯರಿಗೆ ಕಿರುಕುಳ ನೀಡುತ್ತಿವೆ. ರಾಜ್ಯದ ಗೃಹ ಸಚಿವೆಯಾಗಿ ನಾನು ಅವರಿಗೆ ಅಂಥ ಆದೇಶಗಳನ್ನು ನೀಡಿಲ್ಲ. ಶಾ ಅವರ ಸೂಚನೆಯಂತೆ ಹೀಗೆ ನಡೆದುಕೊಳ್ಳುತ್ತಿದ್ದಾರೆ. ಸಿಆರ್‌ಪಿಎಫ್‌ ಬಗ್ಗೆ ನನಗೆ ಗೌರವ ಇದೆ. ಆದರೆ, ಬಿಜೆಪಿಯ ಸೂಚನೆಯಂತೆ ಕೆಲಸ ಮಾಡುವವರ ಬಗ್ಗೆ ನನಗೆ ಗೌರವ ಇಲ್ಲ’ ಎಂದರು.

‘ಚುನಾವಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳಲ್ಲಿ ರಾಜ್ಯದಲ್ಲಿ 10ಕ್ಕೂ ಹೆಚ್ಚು ಮಂದಿ ಹತ್ಯೆಯಾಗಿದ್ದಾರೆ ಎಂದ ಮಮತಾ, ಜವಾಬ್ದಾರಿ ಅರಿತು ನಡೆದುಕೊಳ್ಳುವಂತೆ ಮತ್ತು ಮುಂದಿನ ಐದು ಹಂತಗಳ ಮತದಾನದ ಸಂದರ್ಭದಲ್ಲಿ ಯಾವುದೇ ಸಾವುಗಳು ಸಂಭವಿಸದಂತೆ ನೋಡಿಕೊಳ್ಳಲು ಸಿಆರ್‌ಪಿಎಫ್‌ಗೆ ಸೂಚನೆ ನೀಡಬೇಕು’ ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದರು. ತಾರಕೇಶ್ವರ್‌ನಲ್ಲಿ ಸಿಆರ್‌ಪಿಎಫ್‌ ಸಿಬ್ಬಂದಿಯೊಬ್ಬರು ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ್ದಾರೆ ಎಂದು ಸೋಮವಾರ ಆರೋಪಿಸಲಾಗಿತ್ತು. ಆರೋಪದ ಕಾರಣಕ್ಕೆ ಚುನಾವಣಾ ಆಯೋಗವು ಆ ಸಿಬ್ಬಂದಿಯನ್ನು ಅಲ್ಲಿಂದ ತೆಗೆದುಹಾಕಿತ್ತು. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು