ಭಾನುವಾರ, ಏಪ್ರಿಲ್ 18, 2021
32 °C

Election 2021: ಪ.ಬಂಗಾಳ, ಅಸ್ಸಾಂನಲ್ಲಿ 2ನೇ ಹಂತದ ಮತದಾನ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಎರಡನೇ ಹಂತದ ಚುನಾವಣೆ ಪ್ರಕ್ರಿಯೆ ಏಪ್ರಿಲ್ 1, ಗುರುವಾರದಂದು ಆರಂಭಗೊಂಡಿದೆ. 

ಪಶ್ಚಿಮ ಬಂಗಾಳದ 30 ಕ್ಷೇತ್ರಗಳಿಗೆ ಮತ್ತು ಅಸ್ಸಾಂನ 39 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7ಕ್ಕೆ ಸರಿಯಾಗಿ ಮತದಾನ ಆರಂಭವಾಗಿದೆ. ಮತದಾರರು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. 

ಎರಡು ರಾಜ್ಯಗಳಲ್ಲೂ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದ್ದು, ಇದುವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. 

ಇದನ್ನೂ ಓದಿ: 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿರುವ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಭಾರಿ ಕುತೂಹಲ ಮನೆ ಮಾಡಿದೆ. 

ಮಾಜಿ ಆಪ್ತ ಹಾಗೂ ಟಿಎಂಸಿ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಸುವೇಂದು ಅಧಿಕಾರಿ ಮಮತಾ ವಿರುದ್ದ ನೇರ ಸ್ಪರ್ಧೆಗಿಳಿದಿದ್ದಾರೆ. 

ನಂದಿಗ್ರಾಮದಲ್ಲಿ ಅಹಿತಕರ ಘಟನೆ ತಡೆಯುವ ಹಿನ್ನೆಲೆಯಲ್ಲಿ ಈಗಾಗಲೇ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಲ್ಲದೆ ಎಲ್ಲ ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಚುನಾವಣಾ ಆಯೋಗವು ಘೋಷಿಸಿದೆ. 

ಇದನ್ನೂ ಓದಿ: 

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದಲ್ಲಿ ಎಲ್ಲ 30 ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು