ಕೋವಿಡ್ ನಿಯಮ ಪಾಲಿಸುವಂತೆ ಸಮಾಜವಾದಿ ಪಾರ್ಟಿಗೆ ಚುನಾವಣಾ ಆಯೋಗ ಸೂಚನೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಉತ್ತರ ಪ್ರದೇಶದಲ್ಲಿ ಸರ್ಕಾರ ವಿಧಿಸಿರುವ ಕೋವಿಡ್ ನಿರ್ಬಂಧಗಳನ್ನು ಸಮಾಜವಾದಿ ಪಾರ್ಟಿ ಪಾಲಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಆದರೆ ನಿಯಮ ಉಲ್ಲಂಘಿಸಿದ ಪಕ್ಷದ ವಿರುದ್ಧ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ.
ಬದಲಾಗಿ, ಮುಂದೆ ಎಚ್ಚರಿಕೆ ವಹಿಸಿ, ರಾಜ್ಯ ಸರ್ಕಾರ ಮತ್ತು ಆಯೋಗ ವಿಧಿಸಿರುವ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ನಿರ್ದೇಶನ ನೀಡಿದೆ.
ಕೋವಿಡ್ –19 ನಿರ್ಬಂಧ ಪಾಲಿಸದೇ ಇರುವುದಕ್ಕೆ ಸಮಾಜವಾದಿ ಪಾರ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅಲ್ಲದೆ, ಸಾರ್ವಜನಿಕ ಸಭೆ ನಡೆಸುವುದಕ್ಕೂ ಅವಕಾಶ ನಿರಾಕರಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿ: ಸಮಾಜವಾದಿ ಪಾರ್ಟಿ
ಹೀಗಾಗಿ, ಚುನಾವಣಾ ಆಯೋಗ, ಸಮಾಜವಾದಿ ಪಾರ್ಟಿಗೆ ನೋಟಿಸ್ ಕೊಟ್ಟು ಎಚ್ಚರಿಕೆ ನೀಡಿದೆ.
ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರದಲ್ಲಿ ಬಿಜೆಪಿಗೆ ಗೆಲುವು: ಸಮೀಕ್ಷಾ ವರದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.