ಭಾನುವಾರ, ಏಪ್ರಿಲ್ 18, 2021
25 °C

ಮುಸ್ಲಿಂ ಮತಯಾಚಿಸಿದ ಮಮತಾಗೆ ಚುನಾವಣಾ ಆಯೋಗ ನೋಟಿಸ್

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಏಪ್ರಿಲ್ 3ರಂದು ಮುಸ್ಲಿಂ ಮತದಾರರಲ್ಲಿ ಮಾತಯಾಚನೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ.

ಮುಸ್ಲಿಂ ಮತದಾರರು ತಮ್ಮ ಮತವನ್ನು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿ ವಿಭಜಿಸದಂತೆ ಮನವಿ ಮಾಡಿರುವ ಮಮತಾ ಬ್ಯಾನರ್ಜಿ, ಕೋಮು ನೆಲೆಯಲ್ಲಿ ಎಲ್ಲ ಮತಗಳನ್ನು ತೃಣಮೂಲ ಕಾಂಗ್ರೆಸ್‌ಗೆ ನೀಡಬೇಕೆಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

 

 

 

ಚುನಾವಣಾ ನೀತಿ ಸಂಹಿತೆಯನ್ನು ಮಮತಾ ಬ್ಯಾನರ್ಜಿ ಉಲ್ಲಂಘಿಸಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿದೆ. ಈ ಹೇಳಿಕೆಗೆ ಕುರಿತಂತೆ 48 ತಾಸಿನೊಳಗೆ ವಿವರಣೆ ನೀಡುವಂತೆ ಮಮತಾ ಬ್ಯಾನರ್ಜಿ ಅವರಿಗೆ ಆದೇಶಿಸಿದೆ. ಅಲ್ಲದೆ ಯಾವುದೇ ಉತ್ತರ ನೀಡದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ಇದನ್ನೂ ಓದಿ: 

 

ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ್ದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಟಿಎಂಸಿಗೆ ಮತ ನೀಡುವಂತೆ ಮನವಿ ಮಾಡಿದ್ದರು.

ಈ ಮೊದಲು ಮಮತಾ ಬ್ಯಾನರ್ಜಿ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿಯ ನಿಯೋಗವು ಚುನಾವಣಾ ಆಯೋಗವನ್ನು ಭೇಟಿ ಮಾಡಿ ದೂರು ದಾಖಲಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು