ಮಂಗಳವಾರ, ಏಪ್ರಿಲ್ 20, 2021
26 °C

4 ರಾಜ್ಯ, 1 ಕೇಂದ್ರಾಡಳಿತ ಚುನಾವಣೆ: ಮಾ.‌ 27ರಿಂದ ಮತದಾನ, ಮೇ 2ರಂದು ಮತ ಎಣಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮುಂಬರುವ ತಮಿಳುನಾಡು, ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. 

ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಚುನಾವಣೆಯ ಮಾಹಿತಿ ನೀಡಿತು. ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಮಾರ್ಚ್ 27ರಿಂದ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಹಾಗೆಯೇ ಮೇ 2ರಂದು ಮತ ಎಣಿಕೆ ನಡೆಯಲಿದೆ. 

ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯ/ಕೇಂದ್ರಾಡಳಿತಗಳ ಪಟ್ಟಿ: ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ  

ಚುನಾವಣಾ ವೇಳಾಪಟ್ಟಿ ಇಂತಿದೆ:

ಪಶ್ಚಿಮ ಬಂಗಾಳ: 
ಎಂಟು ಹಂತದಲ್ಲಿ ಮತದಾನ
ಮೊದಲ ಹಂತದಲ್ಲಿ 30 ಕ್ಷೇತ್ರಗಳಲ್ಲಿ ಮಾರ್ಚ್ 27ರಂದು ಮತದಾನ
2ನೇ ಹಂತದಲ್ಲಿ 30 ಕ್ಷೇತ್ರಗಳಿಗೆ ಏಪ್ರಿಲ್ 1ರಂದು ಮತದಾನ
3ನೇ ಹಂತದಲ್ಲಿ 31 ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಮತದಾನ
4ನೇ ಹಂತದಲ್ಲಿ 44 ಕ್ಷೇತ್ರಗಳಿಗೆ ಏಪ್ರಿಲ್ 10ರಂದು ಮತದಾನ
5ನೇ ಹಂತದಲ್ಲಿ 45 ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಮತದಾನ
6ನೇ ಹಂತದಲ್ಲಿ 43 ಕ್ಷೇತ್ರಗಳಿಗೆ ಏಪ್ರಿಲ್ 22ರಂದು ಮತದಾನ
7ನೇ ಹಂತದಲ್ಲಿ 36 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ
8ನೇ ಹಂತದಲ್ಲಿ 35 ಕ್ಷೇತ್ರಗಳಿಗೆ ಏಪ್ರಿಲ್ 29ರಂದು ಮತದಾನ

ಮತ ಎಣಿಕೆ: ಮೇ 2 

ತಮಿಳುನಾಡು: 
ಒಂದು ಹಂತದಲ್ಲಿ ಏಪ್ರಿಲ್ 6ರಂದು ಮತದಾನ
ಮತ ಎಣಿಕೆ: ಮೇ 2 
ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಂದೇ ನಡೆಯಲಿದೆ.

ಪುದುಚೇರಿ: 
ಏಪ್ರಿಲ್ 6ರಂದು ಮತದಾನ
ಮತ ಎಣಿಕೆ: ಮೇ 2 

ಕೇರಳ: 
ಒಂದೇ ಹಂತದಲ್ಲಿ ಎಪ್ರಿಲ್ 6ರಂದು ಮತದಾನ.
ಮತ ಎಣಿಕೆ: ಮೇ 2
ಮಲಪ್ಪುರಂ ಲೋಕಸಭೆಗೂ ಅಂದೇ ಉಪಚುನಾವಣೆ

ಅಸ್ಸಾಂ: ಮೂರು ಹಂತದ ಚುನಾವಣೆ. 
ಮೊದಲ ಹಂತ ಮಾರ್ಚ್ 27
2ನೇ ಹಂತ ಏಪ್ರಿಲ್ 1, 
3ನೇ ಹಂತ ಏಪ್ರಿಲ್ 6

ಮತ ಎಣಿಕೆ: ಮೇ 2 

ಇದನ್ನೂ ಓದಿ: 

ಮತದಾನ ಅವಧಿ 1 ತಾಸು ಹೆಚ್ಚಳ:
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮತದಾನ ಅವಧಿ 1 ತಾಸು ಹೆಚ್ಚಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. 

ಒಟ್ಟು ವಿಧಾನಸಭಾ ಕ್ಷೇತ್ರಗಳ ಅಂಕಿಅಂಶ:
ಅಸ್ಸಾಂನಲ್ಲಿ 126, ತಮಿಳುನಾಡಿನಲ್ಲಿ 234, ಪಶ್ಚಿಮ ಬಂಗಾಳದಲ್ಲಿ 294, ಕೇರಳದಲ್ಲಿ 140 ಮತ್ತು ಪುದುಚೇರಿಯಲ್ಲಿ 30 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಸೇರಿದಂತೆ ಒಟ್ಟು 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಹಾಗೆಯೇ 2.7 ಲಕ್ಷ ಮತಗಟ್ಟೆಗಳನ್ನು ಹೊಂದಿರಲಿದೆ. 

ಮತಗಟ್ಟೆಗಳ ಸಂಖ್ಯೆಯಲ್ಲಿ ಕಡಿತ:
ಕೋವಿಡ್ ಹಿನ್ನೆಲೆಯಲ್ಲಿ ಪ್ರತಿ ರಾಜ್ಯದ ಮತಗಟ್ಟೆಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು