ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕನಾಥ ಶಿಂದೆ ಬಣವೇ ಶಿವಸೇನೆ: ಚುನಾವಣಾ ಆಯೋಗದ ಘೋಷಣೆ

Last Updated 17 ಫೆಬ್ರವರಿ 2023, 14:24 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬಣವನ್ನೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಶುಕ್ರವಾರ ಘೋಷಣೆ ಮಾಡಿದೆ.

ಅದರಂತೆ, ಶಿಂದೆ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಮತ್ತು ಬಾಣ'ದ ಗುರುತು ದಕ್ಕಿದೆ.

2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ 55 ವಿಜೇತ ಅಭ್ಯರ್ಥಿಗಳ ಪೈಕಿ ಶೇ 76 ಮಂದಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುತ್ತಿದ್ದಾರೆ. ಉದ್ಧವ್ ಠಾಕ್ರೆ ಪರವಾಗಿ ಶೇ. 23.5 ಮಂದಿ ಮಾತ್ರ ಇದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.

ತಮ್ಮ ಬಣವನ್ನೇ ನಿಜವಾದ ಶಿವಸೇನೆ ಎಂದು ಘೋಷಿಸಿದ್ದಕ್ಕೆ ಮುಖ್ಯಮಂತ್ರಿ ಏಕನಾಥ ಶಿಂದೆ ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಬಾಳಾಸಾಹೇಬ್ ಠಾಕ್ರೆಯವರ ಸಿದ್ಧಾಂತಕ್ಕೆ ಸಿಕ್ಕ ಜಯ ಎಂದು ಅವರು ಹೇಳಿದ್ದಾರೆ.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT