ಭಾನುವಾರ, ಮಾರ್ಚ್ 26, 2023
25 °C

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ದಿನಾಂಕ ಇಂದು ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಇಂದು ಘೋಷಣೆ ಮಾಡಲಿದೆ. ಈ ನಿಟ್ಟಿನಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಂಜೆ 3 ಗಂಟೆಗೆ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ಗುಜರಾತ್‌ ವಿಧಾನಸಭೆಯ ಪ್ರಸಕ್ತ ಅವಧಿ ಫೆಬ್ರುವರಿ 18, 2023ಕ್ಕೆ ಪೂರ್ಣಗೊಳ್ಳಲಿದೆ. 182 ಸದಸ್ಯರ ಬಲವಿರುವ ವಿಧಾನಸಭೆಯಲ್ಲಿ ಬಿಜೆಪಿಯ 111 ಶಾಸಕರು ಮತ್ತು ಕಾಂಗ್ರೆಸ್‌ನ 62 ಶಾಸಕರಿದ್ದಾರೆ.

ಹಿಮಾಚಲ ಪ್ರದೇಶ ವಿಧಾನಸಭೆಯ ಪ್ರಸಕ್ತ ಅವಧಿ ಜನವರಿ 8, 2023ಕ್ಕೆ ಅಂತ್ಯಗೊಳ್ಳಲಿದೆ. ವಿಧಾನಸಭೆಯಲ್ಲಿ ಬಿಜೆಪಿಯ 45 ಶಾಸಕರು ಮತ್ತು ಕಾಂಗ್ರೆಸ್‌ನ 20 ಶಾಸಕರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು